ಆದಿಕಾಂಡ 27 : 1 (IRVKN)
{ಯಾಕೋಬನು ಮೋಸದಿಂದ ಆಶೀರ್ವಾದವನ್ನು ಪಡೆದುಕೊಂಡದ್ದು} [PS] ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು. [PE][PS]
ಆದಿಕಾಂಡ 27 : 2 (IRVKN)
ಇಸಾಕನು ಅವನಿಗೆ, “ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ.
ಆದಿಕಾಂಡ 27 : 3 (IRVKN)
ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು
ಆದಿಕಾಂಡ 27 : 4 (IRVKN)
ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು. [PE][PS]
ಆದಿಕಾಂಡ 27 : 5 (IRVKN)
ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.
ಆದಿಕಾಂಡ 27 : 6 (IRVKN)
ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ,
ಆದಿಕಾಂಡ 27 : 7 (IRVKN)
‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ.
ಆದಿಕಾಂಡ 27 : 8 (IRVKN)
ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು.
ಆದಿಕಾಂಡ 27 : 9 (IRVKN)
ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.
ಆದಿಕಾಂಡ 27 : 10 (IRVKN)
ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು. [PE][PS]
ಆದಿಕಾಂಡ 27 : 11 (IRVKN)
ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು.
ಆದಿಕಾಂಡ 27 : 12 (IRVKN)
ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು. [PE][PS]
ಆದಿಕಾಂಡ 27 : 13 (IRVKN)
ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು. [PE][PS]
ಆದಿಕಾಂಡ 27 : 14 (IRVKN)
ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.
ಆದಿಕಾಂಡ 27 : 15 (IRVKN)
ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು.
ಆದಿಕಾಂಡ 27 : 16 (IRVKN)
ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು.
ಆದಿಕಾಂಡ 27 : 17 (IRVKN)
ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು. [PE][PS]
ಆದಿಕಾಂಡ 27 : 18 (IRVKN)
ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು. [PE][PS]
ಆದಿಕಾಂಡ 27 : 19 (IRVKN)
ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು, [PE][PS]
ಆದಿಕಾಂಡ 27 : 20 (IRVKN)
ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು. [PE][PS]
ಆದಿಕಾಂಡ 27 : 21 (IRVKN)
ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು. [PE][PS]
ಆದಿಕಾಂಡ 27 : 22 (IRVKN)
ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು.
ಆದಿಕಾಂಡ 27 : 23 (IRVKN)
ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.
ಆದಿಕಾಂಡ 27 : 24 (IRVKN)
ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನಲು, [PE][PS]
ಆದಿಕಾಂಡ 27 : 25 (IRVKN)
ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.
ಆದಿಕಾಂಡ 27 : 26 (IRVKN)
ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, “ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು” ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು. [PE][PS]
ಆದಿಕಾಂಡ 27 : 27 (IRVKN)
ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, [QBR] “ಆಹಾ, ನನ್ನ ಮಗನ ಸುವಾಸನೆಯು, [QBR] ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು. [QBR]
ಆದಿಕಾಂಡ 27 : 28 (IRVKN)
ದೇವರು ನಿನಗೆ ಆಕಾಶದ ಮಂಜನ್ನೂ, [QBR] ಸಾರವುಳ್ಳ ಭೂಮಿಯನ್ನೂ ಕೊಟ್ಟು [QBR] ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ. [QBR]
ಆದಿಕಾಂಡ 27 : 29 (IRVKN)
ಜನಗಳು ನಿನ್ನನ್ನು ಆರಾಧಿಸಲಿ, [QBR] ಜನಾಂಗಗಳು ನಿನಗೆ ಅಧೀನವಾಗಲಿ. [QBR] ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, [QBR] ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. [QBR] ನಿನ್ನನ್ನು ಶಪಿಸುವವರಿಗೆ ಶಾಪವೂ, [QBR] ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು. [PS]
ಆದಿಕಾಂಡ 27 : 30 (IRVKN)
{ಏಸಾವನು ಆಶೀರ್ವಾದಗಳನ್ನು ಕಳೆದುಕೊಂಡಿದ್ದು} [PS] ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು.
ಆದಿಕಾಂಡ 27 : 31 (IRVKN)
ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು. [PE][PS]
ಆದಿಕಾಂಡ 27 : 32 (IRVKN)
ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು. [PE][PS]
ಆದಿಕಾಂಡ 27 : 33 (IRVKN)
ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು. [PE][PS]
ಆದಿಕಾಂಡ 27 : 34 (IRVKN)
ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು, [PE][PS]
ಆದಿಕಾಂಡ 27 : 35 (IRVKN)
“ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು” ಎಂದನು. [PE][PS]
ಆದಿಕಾಂಡ 27 : 36 (IRVKN)
ಅದಕ್ಕೆ ಏಸಾವನು, “ [* ಯಾಕೋಬ ಅಂದರೆ ಪಾದವನ್ನು ಹಿಡಿದು ಎಳೆದವನು ಅಥವಾ ವಂಚಕನು.] ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು, [PE][PS]
ಆದಿಕಾಂಡ 27 : 37 (IRVKN)
ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು. [PE][PS]
ಆದಿಕಾಂಡ 27 : 38 (IRVKN)
ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು, [PE][PS]
ಆದಿಕಾಂಡ 27 : 39 (IRVKN)
ಅವನ ತಂದೆಯಾದ ಇಸಾಕನು ಅವನಿಗೆ, [QBR] “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು [QBR] ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು. [QBR]
ಆದಿಕಾಂಡ 27 : 40 (IRVKN)
ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ [QBR] ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ [QBR] ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು. [PS]
ಆದಿಕಾಂಡ 27 : 41 (IRVKN)
{ಯಾಕೋಬನು ಓಡಿಹೋದದ್ದು} [PS] ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು. [PE][PS]
ಆದಿಕಾಂಡ 27 : 42 (IRVKN)
ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.
ಆದಿಕಾಂಡ 27 : 43 (IRVKN)
ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.
ಆದಿಕಾಂಡ 27 : 44 (IRVKN)
ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು.
ಆದಿಕಾಂಡ 27 : 45 (IRVKN)
ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು. [PE][PS]
ಆದಿಕಾಂಡ 27 : 46 (IRVKN)
ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46

BG:

Opacity:

Color:


Size:


Font: