ಆದಿಕಾಂಡ 29 : 1 (IRVKN)
{ಯಾಕೋಬನು ರೆಬೆಕ್ಕಳನ್ನು ಸಂಧಿಸಿದ್ದು} [PS] ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.
ಆದಿಕಾಂಡ 29 : 2 (IRVKN)
ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.
ಆದಿಕಾಂಡ 29 : 3 (IRVKN)
ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು. [PE][PS]
ಆದಿಕಾಂಡ 29 : 4 (IRVKN)
ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು. [PE][PS]
ಆದಿಕಾಂಡ 29 : 5 (IRVKN)
ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಲ್ಲೆವು” ಎಂದರು. [PE][PS]
ಆದಿಕಾಂಡ 29 : 6 (IRVKN)
ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು. [PE][PS]
ಆದಿಕಾಂಡ 29 : 7 (IRVKN)
ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು,
ಆದಿಕಾಂಡ 29 : 8 (IRVKN)
ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು. [PS]
ಆದಿಕಾಂಡ 29 : 9 (IRVKN)
{ಯಾಕೋಬನು ಲಾಬಾನನ ಹೆಣ್ಣುಮಕ್ಕಳನ್ನು ಮದುವೆಯಾದದ್ದು} [PS] ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.
ಆದಿಕಾಂಡ 29 : 10 (IRVKN)
ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.
ಆದಿಕಾಂಡ 29 : 11 (IRVKN)
ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಜೋರಾಗಿ ಅತ್ತು ಆಕೆಗೆ,
ಆದಿಕಾಂಡ 29 : 12 (IRVKN)
“ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು. [PE][PS]
ಆದಿಕಾಂಡ 29 : 13 (IRVKN)
ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.
ಆದಿಕಾಂಡ 29 : 14 (IRVKN)
ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.
ಆದಿಕಾಂಡ 29 : 15 (IRVKN)
ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು. [PE][PS]
ಆದಿಕಾಂಡ 29 : 16 (IRVKN)
ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.
ಆದಿಕಾಂಡ 29 : 17 (IRVKN)
ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿ ಹೀನವಾಗಿದ್ದವು. ಆದರೆ ರಾಹೇಲಳು ಬಹು ಸುಂದರಿಯು ಲಾವಣ್ಯವತಿಯೂ ಆಗಿದ್ದಳು.
ಆದಿಕಾಂಡ 29 : 18 (IRVKN)
ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,
ಆದಿಕಾಂಡ 29 : 19 (IRVKN)
ಲಾಬಾನನು, “ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು” ಎಂದನು.
ಆದಿಕಾಂಡ 29 : 20 (IRVKN)
ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು. [PE][PS]
ಆದಿಕಾಂಡ 29 : 21 (IRVKN)
ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು. [PE][PS]
ಆದಿಕಾಂಡ 29 : 22 (IRVKN)
ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು.
ಆದಿಕಾಂಡ 29 : 23 (IRVKN)
ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.
ಆದಿಕಾಂಡ 29 : 24 (IRVKN)
ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು. [PE][PS]
ಆದಿಕಾಂಡ 29 : 25 (IRVKN)
ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ, [PE][PS]
ಆದಿಕಾಂಡ 29 : 26 (IRVKN)
ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.
ಆದಿಕಾಂಡ 29 : 27 (IRVKN)
ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. [PE][PS]
ಆದಿಕಾಂಡ 29 : 28 (IRVKN)
ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.
ಆದಿಕಾಂಡ 29 : 29 (IRVKN)
ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಬಿಲ್ಹಾ ಎಂಬ ದಾಸಿಯನ್ನು ಕೂಡ ಕೊಟ್ಟನು.
ಆದಿಕಾಂಡ 29 : 30 (IRVKN)
ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು. [PS]
ಆದಿಕಾಂಡ 29 : 31 (IRVKN)
{ಯಾಕೋಬನಿಗೆ ಮಕ್ಕಳು ಹುಟ್ಟಿದ್ದು} [PS] ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.
ಆದಿಕಾಂಡ 29 : 32 (IRVKN)
ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.” [PE][PS]
ಆದಿಕಾಂಡ 29 : 33 (IRVKN)
ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.” [PE][PS]
ಆದಿಕಾಂಡ 29 : 34 (IRVKN)
ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು. [PE][PS]
ಆದಿಕಾಂಡ 29 : 35 (IRVKN)
ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: