ಆದಿಕಾಂಡ 3 : 1 (IRVKN)
ಪಾಪದ ಉತ್ಪತ್ತಿ
ಆದಿಕಾಂಡ 3 : 2 (IRVKN)
ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
ಆದಿಕಾಂಡ 3 : 3 (IRVKN)
ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
ಆದಿಕಾಂಡ 3 : 4 (IRVKN)
ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
ಆದಿಕಾಂಡ 3 : 5 (IRVKN)
ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
ಆದಿಕಾಂಡ 3 : 6 (IRVKN)
ಆದಿಕಾಂಡ 3 : 7 (IRVKN)
ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
ಆದಿಕಾಂಡ 3 : 8 (IRVKN)
ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು. ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
ಆದಿಕಾಂಡ 3 : 9 (IRVKN)
ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
ಆದಿಕಾಂಡ 3 : 10 (IRVKN)
ಆದಿಕಾಂಡ 3 : 11 (IRVKN)
ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
ಆದಿಕಾಂಡ 3 : 12 (IRVKN)
ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
ಆದಿಕಾಂಡ 3 : 13 (IRVKN)
ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
ಆದಿಕಾಂಡ 3 : 14 (IRVKN)
ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. ದೇವರ ದಂಡನೆ ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
ಆದಿಕಾಂಡ 3 : 15 (IRVKN)
ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
ಆದಿಕಾಂಡ 3 : 16 (IRVKN)
ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
ಆದಿಕಾಂಡ 3 : 17 (IRVKN)
ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
ಆದಿಕಾಂಡ 3 : 18 (IRVKN)
ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
ಆದಿಕಾಂಡ 3 : 19 (IRVKN)
ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
ಆದಿಕಾಂಡ 3 : 20 (IRVKN)
ಆ ಮನುಷ್ಯನು ತನ್ನ ಹೆಂಡತಿಗೆ * ಹವ್ವ ಅಂದರೆ ಜೀವ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
ಆದಿಕಾಂಡ 3 : 21 (IRVKN)
ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
ಆದಿಕಾಂಡ 3 : 22 (IRVKN)
ಆದಾಮ ಹವ್ವಳನ್ನು ತೋಟದಿಂದ ಹೊರಹಾಕಿದ್ದು ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
ಆದಿಕಾಂಡ 3 : 23 (IRVKN)
ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
ಆದಿಕಾಂಡ 3 : 24 (IRVKN)
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24