ಆದಿಕಾಂಡ 30 : 1 (IRVKN)
ಆದಿಕಾಂಡ 30 : 2 (IRVKN)
ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.
ಆದಿಕಾಂಡ 30 : 3 (IRVKN)
ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು. ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ,
ಆದಿಕಾಂಡ 30 : 4 (IRVKN)
ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.
ಆದಿಕಾಂಡ 30 : 5 (IRVKN)
ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು,
ಆದಿಕಾಂಡ 30 : 6 (IRVKN)
ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು.
ಆದಿಕಾಂಡ 30 : 7 (IRVKN)
ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು,
ಆದಿಕಾಂಡ 30 : 8 (IRVKN)
ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.
ಆದಿಕಾಂಡ 30 : 9 (IRVKN)
ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.
ಆದಿಕಾಂಡ 30 : 10 (IRVKN)
ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಗಂಡು ಮಗುವನ್ನು ಹೆರಲು,
ಆದಿಕಾಂಡ 30 : 11 (IRVKN)
ಲೇಯಳು, “ನನಗೆ ಶುಭವಾಯಿತೆಂದು” ಹೇಳಿ ಅದಕ್ಕೆ “ಗಾದ್” ಎಂದು ಹೆಸರಿಟ್ಟಳು.
ಆದಿಕಾಂಡ 30 : 12 (IRVKN)
ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಇನ್ನೊಂದು ಗಂಡು ಮಗುವನ್ನು ಹೆರಲು,
ಆದಿಕಾಂಡ 30 : 13 (IRVKN)
ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಆಶೇರ್” ಎಂದು ಹೆಸರಿಟ್ಟಳು.
ಆದಿಕಾಂಡ 30 : 14 (IRVKN)
ಆದಿಕಾಂಡ 30 : 15 (IRVKN)
ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ * ಈ ಹಣ್ಣುಗಳು ಸುವಾಸನೆಯುಳ್ಳವುಗಳು, ಕಾಮೋತ್ತೇಜಕವಾದವುಗಳು ಮತ್ತು ಸ್ತ್ರೀಯರಿಗೆ ಗರ್ಭಧರಿಸಲು ಉಪಯುಕ್ತವಾದವುಗಳು. ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು.
ಆದಿಕಾಂಡ 30 : 16 (IRVKN)
ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.
ಆದಿಕಾಂಡ 30 : 17 (IRVKN)
ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು. ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.
ಆದಿಕಾಂಡ 30 : 18 (IRVKN)
ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ ಇಸ್ಸಾಕಾರ್ ಅಂದರೆ ಪ್ರತಿಫಲ. ಇಸ್ಸಾಕಾರ್” ಎಂದು ಹೆಸರಿಟ್ಟಳು.
ಆದಿಕಾಂಡ 30 : 19 (IRVKN)
ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.
ಆದಿಕಾಂಡ 30 : 20 (IRVKN)
ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ ಜೆಬುಲೂನ್ ಅಂದರೆ ಗೌರವ. ಜೆಬುಲೂನ್” ಎಂದು ಹೆಸರಿಟ್ಟಳು.
ಆದಿಕಾಂಡ 30 : 21 (IRVKN)
ಆದಿಕಾಂಡ 30 : 22 (IRVKN)
ತರುವಾಯ ಆಕೆಯು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ “ದೀನಾ” ಎಂದು ಹೆಸರಿಟ್ಟಳು. ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.
ಆದಿಕಾಂಡ 30 : 23 (IRVKN)
ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು.
ಆದಿಕಾಂಡ 30 : 24 (IRVKN)
ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು.
ಆದಿಕಾಂಡ 30 : 25 (IRVKN)
ಯಾಕೋಬನ ಮತ್ತು ಲಾಬಾನನ ಆಡುಕುರಿಗಳು ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.
ಆದಿಕಾಂಡ 30 : 26 (IRVKN)
ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.
ಆದಿಕಾಂಡ 30 : 27 (IRVKN)
27 ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.
ಆದಿಕಾಂಡ 30 : 28 (IRVKN)
ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ” ಎಂದು ಹೇಳಿದನು.
ಆದಿಕಾಂಡ 30 : 29 (IRVKN)
ಅದಕ್ಕೆ ಯಾಕೋಬನು, “ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ.
ಆದಿಕಾಂಡ 30 : 30 (IRVKN)
ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು.
ಆದಿಕಾಂಡ 30 : 31 (IRVKN)
ಅದಕ್ಕೆ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು” ಅನ್ನಲು ಯಾಕೋಬನು, “ನನಗೆ ಏನೂ ಕೊಡಬೇಡ, ನೀನು ನನಗೆ ಈ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು”
ಆದಿಕಾಂಡ 30 : 32 (IRVKN)
ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.
ಆದಿಕಾಂಡ 30 : 33 (IRVKN)
ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು.
ಆದಿಕಾಂಡ 30 : 34 (IRVKN)
ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ” ಎಂದನು.
ಆದಿಕಾಂಡ 30 : 35 (IRVKN)
ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.
ಆದಿಕಾಂಡ 30 : 36 (IRVKN)
ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು.
ಆದಿಕಾಂಡ 30 : 37 (IRVKN)
ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು,
ಆದಿಕಾಂಡ 30 : 38 (IRVKN)
ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು. ಆ ಕೋಲುಗಳನ್ನು ಆಡುಕುರಿಗಳ ಹಿಂಡು ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ.
ಆದಿಕಾಂಡ 30 : 39 (IRVKN)
ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
ಆದಿಕಾಂಡ 30 : 40 (IRVKN)
ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಆಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು.
ಆದಿಕಾಂಡ 30 : 41 (IRVKN)
ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಆಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ.
ಆದಿಕಾಂಡ 30 : 42 (IRVKN)
ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು.
ಆದಿಕಾಂಡ 30 : 43 (IRVKN)
ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43