ಆದಿಕಾಂಡ 32 : 1 (IRVKN)
{ಯಾಕೋಬನ ದೈವಪುರುಷನೊಂದಿಗೆ ಹೋರಾಟ} [PS] ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.
ಆದಿಕಾಂಡ 32 : 2 (IRVKN)
ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ [* ಮಹನಯಿಮ್ ಅಂದರೆ ಸುತ್ತವರೆದ ಸೈನ್ಯ.] ಮಹನಯಿಮ್” ಎಂದು ಹೆಸರಿಟ್ಟನು. [PE][PS]
ಆದಿಕಾಂಡ 32 : 3 (IRVKN)
ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.
ಆದಿಕಾಂಡ 32 : 4 (IRVKN)
ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು
ಆದಿಕಾಂಡ 32 : 5 (IRVKN)
ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’ ” ಎಂದು ಹೇಳಿರಿ ಅಂದನು. [PE][PS]
ಆದಿಕಾಂಡ 32 : 6 (IRVKN)
ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ, [PE][PS]
ಆದಿಕಾಂಡ 32 : 7 (IRVKN)
ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
ಆದಿಕಾಂಡ 32 : 8 (IRVKN)
ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು. [PE][PS]
ಆದಿಕಾಂಡ 32 : 9 (IRVKN)
ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
ಆದಿಕಾಂಡ 32 : 10 (IRVKN)
ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
ಆದಿಕಾಂಡ 32 : 11 (IRVKN)
ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,
ಆದಿಕಾಂಡ 32 : 12 (IRVKN)
‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’ ” ಎಂದನು. [PE][PS]
ಆದಿಕಾಂಡ 32 : 13 (IRVKN)
ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
ಆದಿಕಾಂಡ 32 : 14 (IRVKN)
ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ
ಆದಿಕಾಂಡ 32 : 15 (IRVKN)
ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.
ಆದಿಕಾಂಡ 32 : 16 (IRVKN)
ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು. [PE][PS]
ಆದಿಕಾಂಡ 32 : 17 (IRVKN)
ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’ ” ಎಂದು ಕೇಳಿದರೆ,
ಆದಿಕಾಂಡ 32 : 18 (IRVKN)
ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು. [PE][PS]
ಆದಿಕಾಂಡ 32 : 19 (IRVKN)
ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.
ಆದಿಕಾಂಡ 32 : 20 (IRVKN)
ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.
ಆದಿಕಾಂಡ 32 : 21 (IRVKN)
ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು. [PE][PS]
ಆದಿಕಾಂಡ 32 : 22 (IRVKN)
ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.
ಆದಿಕಾಂಡ 32 : 23 (IRVKN)
ಅವರನ್ನೂ, ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ
ಆದಿಕಾಂಡ 32 : 24 (IRVKN)
ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
ಆದಿಕಾಂಡ 32 : 25 (IRVKN)
ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.
ಆದಿಕಾಂಡ 32 : 26 (IRVKN)
ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು. [PE][PS]
ಆದಿಕಾಂಡ 32 : 27 (IRVKN)
ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ, [PE][PS]
ಆದಿಕಾಂಡ 32 : 28 (IRVKN)
ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು. [PE][PS]
ಆದಿಕಾಂಡ 32 : 29 (IRVKN)
ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು. [PE][PS]
ಆದಿಕಾಂಡ 32 : 30 (IRVKN)
ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ [† ಪೆನೀಯೇಲ್ ಅಂದರೆ ದೇವರ ಮುಖ.] ಪೆನೀಯೇಲ್ ಎಂದು ಹೆಸರಿಟ್ಟನು, [PE][PS]
ಆದಿಕಾಂಡ 32 : 31 (IRVKN)
ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
ಆದಿಕಾಂಡ 32 : 32 (IRVKN)
ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32

BG:

Opacity:

Color:


Size:


Font: