ಆದಿಕಾಂಡ 34 : 1 (IRVKN)
{ದೀನ ಮತ್ತು ಶೆಕೆಮಿನವರು} [PS] ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.
ಆದಿಕಾಂಡ 34 : 2 (IRVKN)
ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.
ಆದಿಕಾಂಡ 34 : 3 (IRVKN)
ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.
ಆದಿಕಾಂಡ 34 : 4 (IRVKN)
ಶೆಕೆಮನು ತನ್ನ ತಂದೆಯಾದ ಹಮೋರನಿಗೆ, “ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು” ಎಂದು ಕೇಳಿಕೊಂಡನು. [PE][PS]
ಆದಿಕಾಂಡ 34 : 5 (IRVKN)
ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
ಆದಿಕಾಂಡ 34 : 6 (IRVKN)
ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.
ಆದಿಕಾಂಡ 34 : 7 (IRVKN)
ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು. [PE][PS]
ಆದಿಕಾಂಡ 34 : 8 (IRVKN)
ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
ಆದಿಕಾಂಡ 34 : 9 (IRVKN)
ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ.
ಆದಿಕಾಂಡ 34 : 10 (IRVKN)
ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು. [PE][PS]
ಆದಿಕಾಂಡ 34 : 11 (IRVKN)
ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.
ಆದಿಕಾಂಡ 34 : 12 (IRVKN)
ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು. [PE][PS]
ಆದಿಕಾಂಡ 34 : 13 (IRVKN)
ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
ಆದಿಕಾಂಡ 34 : 14 (IRVKN)
ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.
ಆದಿಕಾಂಡ 34 : 15 (IRVKN)
ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.
ಆದಿಕಾಂಡ 34 : 16 (IRVKN)
ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
ಆದಿಕಾಂಡ 34 : 17 (IRVKN)
ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು. [PE][PS]
ಆದಿಕಾಂಡ 34 : 18 (IRVKN)
ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.
ಆದಿಕಾಂಡ 34 : 19 (IRVKN)
ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
ಆದಿಕಾಂಡ 34 : 20 (IRVKN)
ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,
ಆದಿಕಾಂಡ 34 : 21 (IRVKN)
“ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ. [PE][PS]
ಆದಿಕಾಂಡ 34 : 22 (IRVKN)
“ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.
ಆದಿಕಾಂಡ 34 : 23 (IRVKN)
ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು. [PE][PS]
ಆದಿಕಾಂಡ 34 : 24 (IRVKN)
ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು. [PS]
ಆದಿಕಾಂಡ 34 : 25 (IRVKN)
{ದೀನಳ ಸಹೋದರರು ಪ್ರತಿಕಾರ ಮಾಡಿದ್ದು} [PS] ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
ಆದಿಕಾಂಡ 34 : 26 (IRVKN)
ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.
ಆದಿಕಾಂಡ 34 : 27 (IRVKN)
ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
ಆದಿಕಾಂಡ 34 : 28 (IRVKN)
ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
ಆದಿಕಾಂಡ 34 : 29 (IRVKN)
ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು. [PE][PS]
ಆದಿಕಾಂಡ 34 : 30 (IRVKN)
ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
ಆದಿಕಾಂಡ 34 : 31 (IRVKN)
ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: