ಆದಿಕಾಂಡ 35 : 1 (IRVKN)
{ಯಾಕೋಬನು ಬೇತೇಲಿಗೆ ಬಂದದ್ದು} [PS] ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು. [PE][PS]
ಆದಿಕಾಂಡ 35 : 2 (IRVKN)
ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,
ಆದಿಕಾಂಡ 35 : 3 (IRVKN)
ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.
ಆದಿಕಾಂಡ 35 : 4 (IRVKN)
ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.
ಆದಿಕಾಂಡ 35 : 5 (IRVKN)
ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ. [PE][PS]
ಆದಿಕಾಂಡ 35 : 6 (IRVKN)
ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.
ಆದಿಕಾಂಡ 35 : 7 (IRVKN)
ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ [* ಏಲ್ ಬೇತೇಲ್ ಅಂದರೆ ಬೇತೇಲಿನ ದೇವರು.] ಏಲ್ ಬೇತೇಲ್ ಎಂದು ಹೆಸರಿಟ್ಟನು. [PE][PS]
ಆದಿಕಾಂಡ 35 : 8 (IRVKN)
ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ [† ಅಲ್ಲೋನ್ ಬಾಕೂತ್ ಅಂದರೆ ಅಳುವ ಮರ. ] ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು. [PS]
ಆದಿಕಾಂಡ 35 : 9 (IRVKN)
{ದೇವರು ಯಾಕೋಬನಿಗೆ ಮಾಡಿದ ವಾಗ್ದಾನ} [PS] ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.
ಆದಿಕಾಂಡ 35 : 10 (IRVKN)
ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. [PE][PS]
ಆದಿಕಾಂಡ 35 : 11 (IRVKN)
ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
ಆದಿಕಾಂಡ 35 : 12 (IRVKN)
ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
ಆದಿಕಾಂಡ 35 : 13 (IRVKN)
ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು. [PE][PS]
ಆದಿಕಾಂಡ 35 : 14 (IRVKN)
ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
ಆದಿಕಾಂಡ 35 : 15 (IRVKN)
ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಬೆನ್ಯಾಮೀನ ಜನನ, ರಾಹೇಲಳ ಮರಣ [PE][PS]
ಆದಿಕಾಂಡ 35 : 16 (IRVKN)
ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
ಆದಿಕಾಂಡ 35 : 17 (IRVKN)
ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.
ಆದಿಕಾಂಡ 35 : 18 (IRVKN)
ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ [‡ ದುಃಖ ಪುತ್ರನು.] ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ [§ ನನ್ನ ಬಲಗೈ ಪುತ್ರನು.] ಬೆನ್ಯಾಮೀನ” ಎಂದು ಹೆಸರಿಟ್ಟನು. [PE][PS]
ಆದಿಕಾಂಡ 35 : 19 (IRVKN)
ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.
ಆದಿಕಾಂಡ 35 : 20 (IRVKN)
ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ. [PE][PS]
ಆದಿಕಾಂಡ 35 : 21 (IRVKN)
ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು. (1ಪೂರ್ವ 2:1-2) [PS]
ಆದಿಕಾಂಡ 35 : 22 (IRVKN)
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು. [PE][PS]
ಆದಿಕಾಂಡ 35 : 23 (IRVKN)
ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್. [PE][PS]
ಆದಿಕಾಂಡ 35 : 24 (IRVKN)
ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು. [PE][PS]
ಆದಿಕಾಂಡ 35 : 25 (IRVKN)
ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ. [PE][PS]
ಆದಿಕಾಂಡ 35 : 26 (IRVKN)
ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ. [PS]
ಆದಿಕಾಂಡ 35 : 27 (IRVKN)
{ಇಸಾಕನ ಮರಣ} [PS] ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ. [PE][PS]
ಆದಿಕಾಂಡ 35 : 28 (IRVKN)
ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು. [PE][PS]
ಆದಿಕಾಂಡ 35 : 29 (IRVKN)
ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: