ಆದಿಕಾಂಡ 36 : 1 (IRVKN)
{ಏಸಾವನ ವಂಶಸ್ಥರು} (1ಪೂರ್ವ 2:34-37) [PS] ಎದೋಮ್ ಎಂಬ ಏಸಾವನ ವಂಶಾವಳಿ ಇದು: [PE][PS]
ಆದಿಕಾಂಡ 36 : 2 (IRVKN)
ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,
ಆದಿಕಾಂಡ 36 : 3 (IRVKN)
ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು. [PE][PS]
ಆದಿಕಾಂಡ 36 : 4 (IRVKN)
ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
ಆದಿಕಾಂಡ 36 : 5 (IRVKN)
ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ. [PE][PS]
ಆದಿಕಾಂಡ 36 : 6 (IRVKN)
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.
ಆದಿಕಾಂಡ 36 : 7 (IRVKN)
ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
ಆದಿಕಾಂಡ 36 : 8 (IRVKN)
ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು. [PE][PS]
ಆದಿಕಾಂಡ 36 : 9 (IRVKN)
ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ: [PE][PS]
ಆದಿಕಾಂಡ 36 : 10 (IRVKN)
ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು. [PE][PS]
ಆದಿಕಾಂಡ 36 : 11 (IRVKN)
ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್, [PE][PS]
ಆದಿಕಾಂಡ 36 : 12 (IRVKN)
ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು. [PE][PS]
ಆದಿಕಾಂಡ 36 : 13 (IRVKN)
ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು. [PE][PS]
ಆದಿಕಾಂಡ 36 : 14 (IRVKN)
ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು. [PE][PS]
ಆದಿಕಾಂಡ 36 : 15 (IRVKN)
ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,
ಆದಿಕಾಂಡ 36 : 16 (IRVKN)
ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು. [PE][PS]
ಆದಿಕಾಂಡ 36 : 17 (IRVKN)
ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು. [PE][PS]
ಆದಿಕಾಂಡ 36 : 18 (IRVKN)
ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.
ಆದಿಕಾಂಡ 36 : 19 (IRVKN)
ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು. [PS]
ಆದಿಕಾಂಡ 36 : 20 (IRVKN)
{ಸೇಯೀರನ ವಂಶಸ್ಥರು} (1ಪೂರ್ವ 1:38-42) [PS] ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
ಆದಿಕಾಂಡ 36 : 21 (IRVKN)
ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು. [PE][PS]
ಆದಿಕಾಂಡ 36 : 22 (IRVKN)
ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ. [PE][PS]
ಆದಿಕಾಂಡ 36 : 23 (IRVKN)
ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್. [PE][PS]
ಆದಿಕಾಂಡ 36 : 24 (IRVKN)
ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ [* ಕಾಡುಕತ್ತೆಗಳು.] ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು. [PE][PS]
ಆದಿಕಾಂಡ 36 : 25 (IRVKN)
ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು. [PE][PS]
ಆದಿಕಾಂಡ 36 : 26 (IRVKN)
ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್. [PE][PS]
ಆದಿಕಾಂಡ 36 : 27 (IRVKN)
ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್. [PE][PS]
ಆದಿಕಾಂಡ 36 : 28 (IRVKN)
ದೀಶಾನನ ಮಕ್ಕಳು: ಊಚ್ ಮತ್ತು ಅರಾನ್. [PE][PS]
ಆದಿಕಾಂಡ 36 : 29 (IRVKN)
ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ
ಆದಿಕಾಂಡ 36 : 30 (IRVKN)
ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು. [PS]
ಆದಿಕಾಂಡ 36 : 31 (IRVKN)
{ಎದೋಮ್ಯರ ಅರಸುಗಳು} (1ಪೂರ್ವ 1:43-54) [PS] ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ: [PE][PS]
ಆದಿಕಾಂಡ 36 : 32 (IRVKN)
ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ. [PE][PS]
ಆದಿಕಾಂಡ 36 : 33 (IRVKN)
ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು. [PE][PS]
ಆದಿಕಾಂಡ 36 : 34 (IRVKN)
ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು. [PE][PS]
ಆದಿಕಾಂಡ 36 : 35 (IRVKN)
ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್. [PE][PS]
ಆದಿಕಾಂಡ 36 : 36 (IRVKN)
ಹದದನು ಸತ್ತ ನಂತರ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು. [PE][PS]
ಆದಿಕಾಂಡ 36 : 37 (IRVKN)
ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು. [PE][PS]
ಆದಿಕಾಂಡ 36 : 38 (IRVKN)
ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.
ಆದಿಕಾಂಡ 36 : 39 (IRVKN)
ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. [PE][PS]
ಆದಿಕಾಂಡ 36 : 40 (IRVKN)
ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,
ಆದಿಕಾಂಡ 36 : 41 (IRVKN)
ಒಹೋಲಿಬಾಮ, ಏಲಾ, ಪೀನೋನ್,
ಆದಿಕಾಂಡ 36 : 42 (IRVKN)
ಕೆನೆಜ್, ತೇಮಾನ್, ಮಿಪ್ಚಾರ್
ಆದಿಕಾಂಡ 36 : 43 (IRVKN)
ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43

BG:

Opacity:

Color:


Size:


Font: