ಆದಿಕಾಂಡ 37 : 1 (IRVKN)
{ಯೋಸೇಫನ ಕನಸು} [PS] ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು. [PE][PS]
ಆದಿಕಾಂಡ 37 : 2 (IRVKN)
ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು. [PE][PS]
ಆದಿಕಾಂಡ 37 : 3 (IRVKN)
ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.
ಆದಿಕಾಂಡ 37 : 4 (IRVKN)
ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು. [PE][PS]
ಆದಿಕಾಂಡ 37 : 5 (IRVKN)
ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
ಆದಿಕಾಂಡ 37 : 6 (IRVKN)
ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.
ಆದಿಕಾಂಡ 37 : 7 (IRVKN)
ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು. [PE][PS]
ಆದಿಕಾಂಡ 37 : 8 (IRVKN)
ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು. [PE][PS]
ಆದಿಕಾಂಡ 37 : 9 (IRVKN)
ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು. [PE][PS]
ಆದಿಕಾಂಡ 37 : 10 (IRVKN)
ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.
ಆದಿಕಾಂಡ 37 : 11 (IRVKN)
ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು. [PS]
ಆದಿಕಾಂಡ 37 : 12 (IRVKN)
{ಯೋಸೇಫನನ್ನು ಮಾರಿದ್ದು} [PS] ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು.
ಆದಿಕಾಂಡ 37 : 13 (IRVKN)
ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು. [PE][PS]
ಆದಿಕಾಂಡ 37 : 14 (IRVKN)
ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.
ಆದಿಕಾಂಡ 37 : 15 (IRVKN)
ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು. [PE][PS]
ಆದಿಕಾಂಡ 37 : 16 (IRVKN)
ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು” ಎಂದನು. [PE][PS]
ಆದಿಕಾಂಡ 37 : 17 (IRVKN)
ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
ಆದಿಕಾಂಡ 37 : 18 (IRVKN)
ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು. [PE][PS]
ಆದಿಕಾಂಡ 37 : 19 (IRVKN)
ಅವರು ಒಬ್ಬರಿಗೊಬ್ಬರು, “ಅಗೋ ಆ ಕನಸುಗಾರನು ಬರುತ್ತಿದ್ದಾನೆ ನೋಡಿರಿ
ಆದಿಕಾಂಡ 37 : 20 (IRVKN)
ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. [PE][PS]
ಆದಿಕಾಂಡ 37 : 21 (IRVKN)
ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು.
ಆದಿಕಾಂಡ 37 : 22 (IRVKN)
ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು. [PE][PS]
ಆದಿಕಾಂಡ 37 : 23 (IRVKN)
ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.
ಆದಿಕಾಂಡ 37 : 24 (IRVKN)
ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು. [PE][PS]
ಆದಿಕಾಂಡ 37 : 25 (IRVKN)
ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು. [PE][PS]
ಆದಿಕಾಂಡ 37 : 26 (IRVKN)
ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?
ಆದಿಕಾಂಡ 37 : 27 (IRVKN)
ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು. [PE][PS]
ಆದಿಕಾಂಡ 37 : 28 (IRVKN)
ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ [* 230 ಗ್ರಾಂ ಬೆಳ್ಳಿ, ಇದು ಯುವ ದಾಸನಿಗಿರುವ ಬೆಲೆ.] ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು. [PE][PS]
ಆದಿಕಾಂಡ 37 : 29 (IRVKN)
ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
ಆದಿಕಾಂಡ 37 : 30 (IRVKN)
ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು. [PE][PS]
ಆದಿಕಾಂಡ 37 : 31 (IRVKN)
ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,
ಆದಿಕಾಂಡ 37 : 32 (IRVKN)
ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು. [PE][PS]
ಆದಿಕಾಂಡ 37 : 33 (IRVKN)
ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು. [PE][PS]
ಆದಿಕಾಂಡ 37 : 34 (IRVKN)
ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
ಆದಿಕಾಂಡ 37 : 35 (IRVKN)
ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. [PE][PS]
ಆದಿಕಾಂಡ 37 : 36 (IRVKN)
ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: