ಆದಿಕಾಂಡ 41 : 1 (IRVKN)
ಫರೋಹನ ಕನಸುಗಳು ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
ಆದಿಕಾಂಡ 41 : 2 (IRVKN)
ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
ಆದಿಕಾಂಡ 41 : 3 (IRVKN)
ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.
ಆದಿಕಾಂಡ 41 : 4 (IRVKN)
ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
ಆದಿಕಾಂಡ 41 : 5 (IRVKN)
ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.
ಆದಿಕಾಂಡ 41 : 6 (IRVKN)
ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
ಆದಿಕಾಂಡ 41 : 7 (IRVKN)
ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.
ಆದಿಕಾಂಡ 41 : 8 (IRVKN)
ಆದಿಕಾಂಡ 41 : 9 (IRVKN)
ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ. ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.
ಆದಿಕಾಂಡ 41 : 10 (IRVKN)
ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,
ಆದಿಕಾಂಡ 41 : 11 (IRVKN)
ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
ಆದಿಕಾಂಡ 41 : 12 (IRVKN)
ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
ಆದಿಕಾಂಡ 41 : 13 (IRVKN)
ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು.
ಆದಿಕಾಂಡ 41 : 14 (IRVKN)
ಆದಿಕಾಂಡ 41 : 15 (IRVKN)
ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
ಆದಿಕಾಂಡ 41 : 16 (IRVKN)
ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
ಆದಿಕಾಂಡ 41 : 17 (IRVKN)
ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು. ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.”
ಆದಿಕಾಂಡ 41 : 18 (IRVKN)
ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
ಆದಿಕಾಂಡ 41 : 19 (IRVKN)
ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.
ಆದಿಕಾಂಡ 41 : 20 (IRVKN)
ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.
ಆದಿಕಾಂಡ 41 : 21 (IRVKN)
ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು.
ಆದಿಕಾಂಡ 41 : 22 (IRVKN)
“ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು.
ಆದಿಕಾಂಡ 41 : 23 (IRVKN)
ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
ಆದಿಕಾಂಡ 41 : 24 (IRVKN)
ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.
ಆದಿಕಾಂಡ 41 : 25 (IRVKN)
ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.
ಆದಿಕಾಂಡ 41 : 26 (IRVKN)
ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.
ಆದಿಕಾಂಡ 41 : 27 (IRVKN)
ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
ಆದಿಕಾಂಡ 41 : 28 (IRVKN)
ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.
ಆದಿಕಾಂಡ 41 : 29 (IRVKN)
ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು.
ಆದಿಕಾಂಡ 41 : 30 (IRVKN)
ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
ಆದಿಕಾಂಡ 41 : 31 (IRVKN)
ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.
ಆದಿಕಾಂಡ 41 : 32 (IRVKN)
ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
ಆದಿಕಾಂಡ 41 : 33 (IRVKN)
“ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
ಆದಿಕಾಂಡ 41 : 34 (IRVKN)
ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.
ಆದಿಕಾಂಡ 41 : 35 (IRVKN)
ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
ಆದಿಕಾಂಡ 41 : 36 (IRVKN)
ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು.
ಆದಿಕಾಂಡ 41 : 37 (IRVKN)
ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.
ಆದಿಕಾಂಡ 41 : 38 (IRVKN)
ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.
ಆದಿಕಾಂಡ 41 : 39 (IRVKN)
ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.
ಆದಿಕಾಂಡ 41 : 40 (IRVKN)
ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
ಆದಿಕಾಂಡ 41 : 41 (IRVKN)
ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,
ಆದಿಕಾಂಡ 41 : 42 (IRVKN)
ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
ಆದಿಕಾಂಡ 41 : 43 (IRVKN)
ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
ಆದಿಕಾಂಡ 41 : 44 (IRVKN)
ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.
ಆದಿಕಾಂಡ 41 : 45 (IRVKN)
ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
ಆದಿಕಾಂಡ 41 : 46 (IRVKN)
ಏಳು ವರ್ಷ ಬರಗಾಲ ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
ಆದಿಕಾಂಡ 41 : 47 (IRVKN)
ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.
ಆದಿಕಾಂಡ 41 : 48 (IRVKN)
ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.
ಆದಿಕಾಂಡ 41 : 49 (IRVKN)
ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.
ಆದಿಕಾಂಡ 41 : 50 (IRVKN)
ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.
ಆದಿಕಾಂಡ 41 : 51 (IRVKN)
ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “* ಮರೆತುಹೋಗುವಂತೆ ಮಾಡುವುದು. ಮನಸ್ಸೆ” ಎಂದು ಹೆಸರಿಟ್ಟನು.
ಆದಿಕಾಂಡ 41 : 52 (IRVKN)
ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ ಎರಡರಷ್ಟು ಅಭಿವೃದ್ಧಿ. ಎಫ್ರಾಯೀಮ್” ಎಂದು ಹೆಸರಿಟ್ಟನು.
ಆದಿಕಾಂಡ 41 : 53 (IRVKN)
ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ
ಆದಿಕಾಂಡ 41 : 54 (IRVKN)
ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
ಆದಿಕಾಂಡ 41 : 55 (IRVKN)
ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
ಆದಿಕಾಂಡ 41 : 56 (IRVKN)
ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
ಆದಿಕಾಂಡ 41 : 57 (IRVKN)
ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57