ಆದಿಕಾಂಡ 44 : 1 (IRVKN)
{ಯೋಸೇಫನ ಬೆಳ್ಳಿಯ ಪಾತ್ರೆ} [PS] ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.
ಆದಿಕಾಂಡ 44 : 2 (IRVKN)
ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು. [PE][PS]
ಆದಿಕಾಂಡ 44 : 3 (IRVKN)
ಅವರೆಲ್ಲರೂ ಬೆಳಿಗ್ಗೆ ಹೊತ್ತು ಅವರು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು.
ಆದಿಕಾಂಡ 44 : 4 (IRVKN)
ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?
ಆದಿಕಾಂಡ 44 : 5 (IRVKN)
ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು. [PE][PS]
ಆದಿಕಾಂಡ 44 : 6 (IRVKN)
ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ, ಅವರಿಗೆ ಈ ಮಾತುಗಳನ್ನು ಹೇಳಿದನು.
ಆದಿಕಾಂಡ 44 : 7 (IRVKN)
ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.
ಆದಿಕಾಂಡ 44 : 8 (IRVKN)
ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
ಆದಿಕಾಂಡ 44 : 9 (IRVKN)
ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು. [PE][PS]
ಆದಿಕಾಂಡ 44 : 10 (IRVKN)
ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ, [PE][PS]
ಆದಿಕಾಂಡ 44 : 11 (IRVKN)
ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಅವುಗಳನ್ನು ಬಿಚ್ಚಿದರು.
ಆದಿಕಾಂಡ 44 : 12 (IRVKN)
ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.
ಆದಿಕಾಂಡ 44 : 13 (IRVKN)
ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು. [PE][PS]
ಆದಿಕಾಂಡ 44 : 14 (IRVKN)
ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.
ಆದಿಕಾಂಡ 44 : 15 (IRVKN)
ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು, [PE][PS]
ಆದಿಕಾಂಡ 44 : 16 (IRVKN)
ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು. [PE][PS]
ಆದಿಕಾಂಡ 44 : 17 (IRVKN)
ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು. [PE][PS]
ಆದಿಕಾಂಡ 44 : 18 (IRVKN)
ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.
ಆದಿಕಾಂಡ 44 : 19 (IRVKN)
ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು,
ಆದಿಕಾಂಡ 44 : 20 (IRVKN)
ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು. [PE][PS]
ಆದಿಕಾಂಡ 44 : 21 (IRVKN)
“ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು,
ಆದಿಕಾಂಡ 44 : 22 (IRVKN)
ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು.
ಆದಿಕಾಂಡ 44 : 23 (IRVKN)
ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ.
ಆದಿಕಾಂಡ 44 : 24 (IRVKN)
ನಾವು ನಿಮ್ಮ ಸೇವಕನಾದ ನಮ್ಮ ತಂದೆಯ ಬಳಿಗೆ ಹೋಗಿ ಸ್ವಾಮಿಯ ಮಾತುಗಳನ್ನು ತಿಳಿಸಿದೆವು. [PE][PS]
ಆದಿಕಾಂಡ 44 : 25 (IRVKN)
“ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ,
ಆದಿಕಾಂಡ 44 : 26 (IRVKN)
ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು.
ಆದಿಕಾಂಡ 44 : 27 (IRVKN)
ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ.
ಆದಿಕಾಂಡ 44 : 28 (IRVKN)
ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.
ಆದಿಕಾಂಡ 44 : 29 (IRVKN)
ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. [PE][PS]
ಆದಿಕಾಂಡ 44 : 30 (IRVKN)
“ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ,
ಆದಿಕಾಂಡ 44 : 31 (IRVKN)
ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.
ಆದಿಕಾಂಡ 44 : 32 (IRVKN)
ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ. [PE][PS]
ಆದಿಕಾಂಡ 44 : 33 (IRVKN)
“ಆದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
ಆದಿಕಾಂಡ 44 : 34 (IRVKN)
ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34

BG:

Opacity:

Color:


Size:


Font: