ಆದಿಕಾಂಡ 45 : 1 (IRVKN)
{ಯೋಸೇಫನು ತನ್ನನ್ನು ಗುರುತಿಸಿಕೊಂಡದ್ದು} [PS] ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
ಆದಿಕಾಂಡ 45 : 2 (IRVKN)
ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು. [PE][PS]
ಆದಿಕಾಂಡ 45 : 3 (IRVKN)
ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.
ಆದಿಕಾಂಡ 45 : 4 (IRVKN)
ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.
ಆದಿಕಾಂಡ 45 : 5 (IRVKN)
ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.
ಆದಿಕಾಂಡ 45 : 6 (IRVKN)
ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
ಆದಿಕಾಂಡ 45 : 7 (IRVKN)
ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು. [PE][PS]
ಆದಿಕಾಂಡ 45 : 8 (IRVKN)
“ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.
ಆದಿಕಾಂಡ 45 : 9 (IRVKN)
ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
ಆದಿಕಾಂಡ 45 : 10 (IRVKN)
ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.
ಆದಿಕಾಂಡ 45 : 11 (IRVKN)
ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ. [PE][PS]
ಆದಿಕಾಂಡ 45 : 12 (IRVKN)
“ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
ಆದಿಕಾಂಡ 45 : 13 (IRVKN)
ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ, [PE][PS]
ಆದಿಕಾಂಡ 45 : 14 (IRVKN)
ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
ಆದಿಕಾಂಡ 45 : 15 (IRVKN)
ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು. [PE][PS]
ಆದಿಕಾಂಡ 45 : 16 (IRVKN)
ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.
ಆದಿಕಾಂಡ 45 : 17 (IRVKN)
ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,
ಆದಿಕಾಂಡ 45 : 18 (IRVKN)
ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.
ಆದಿಕಾಂಡ 45 : 19 (IRVKN)
ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
ಆದಿಕಾಂಡ 45 : 20 (IRVKN)
ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’ ” ಎಂದು ಹೇಳಿದನು. [PE][PS]
ಆದಿಕಾಂಡ 45 : 21 (IRVKN)
ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
ಆದಿಕಾಂಡ 45 : 22 (IRVKN)
ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ [* 3.4 ಕಿಲೋಗ್ರಾಂ ಬೆಳ್ಳಿ.] ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.
ಆದಿಕಾಂಡ 45 : 23 (IRVKN)
ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.
ಆದಿಕಾಂಡ 45 : 24 (IRVKN)
ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು. [PE][PS]
ಆದಿಕಾಂಡ 45 : 25 (IRVKN)
ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು.
ಆದಿಕಾಂಡ 45 : 26 (IRVKN)
ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
ಆದಿಕಾಂಡ 45 : 27 (IRVKN)
ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
ಆದಿಕಾಂಡ 45 : 28 (IRVKN)
ಆಗ ಇಸ್ರಾಯೇಲನು, “ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು” ಎಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: