ಆದಿಕಾಂಡ 49 : 1 (IRVKN)
{ತನ್ನ ಮಕ್ಕಳನ್ನು ಕುರಿತು ಯಾಕೋಬನ ಭವಿಷ್ಯವಾಣಿ} [PS] ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ. [QBR]
ಆದಿಕಾಂಡ 49 : 2 (IRVKN)
ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ. [QBR] ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ. [QBR]
ಆದಿಕಾಂಡ 49 : 3 (IRVKN)
ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, [QBR] ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ. [QBR]
ಆದಿಕಾಂಡ 49 : 4 (IRVKN)
ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. [QBR] ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, [QBR] ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು! [QBR]
ಆದಿಕಾಂಡ 49 : 5 (IRVKN)
ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. [QBR] ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು. [QBR]
ಆದಿಕಾಂಡ 49 : 6 (IRVKN)
ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. [QBR] ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. [QBR] ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. [QBR] ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು. [QBR]
ಆದಿಕಾಂಡ 49 : 7 (IRVKN)
ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು [QBR] ಅದು ಶಾಪಗ್ರಸ್ಥವಾದುದಾಗಿದೆ. [QBR] ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. [QBR] ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು. [QBR]
ಆದಿಕಾಂಡ 49 : 8 (IRVKN)
ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. [QBR] ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. [QBR] ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು. [QBR]
ಆದಿಕಾಂಡ 49 : 9 (IRVKN)
ಯೆಹೂದನು [* ಅಥವಾ ಸಿಂಹಿಣಿ.] ಪ್ರಾಯದ ಸಿಂಹದಂತಿದ್ದಾನೆ. [QBR] ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. [QBR] ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. [QBR] ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು? [QBR]
ಆದಿಕಾಂಡ 49 : 10 (IRVKN)
[† ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಅದು ಯಾರಿಗೆ ಸೇರಲ್ಪಟ್ಟದಾಗಿರುತ್ತದೇ?] ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. [QBR] ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. [QBR] ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು. [QBR]
ಆದಿಕಾಂಡ 49 : 11 (IRVKN)
ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. [QBR] ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; [QBR] ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; [QBR] ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು. [QBR]
ಆದಿಕಾಂಡ 49 : 12 (IRVKN)
ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. [QBR] ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು. [QBR]
ಆದಿಕಾಂಡ 49 : 13 (IRVKN)
ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. [QBR] ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. [QBR] ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು. [QBR]
ಆದಿಕಾಂಡ 49 : 14 (IRVKN)
ಇಸ್ಸಾಕಾರನು [‡ ದನಕುರಿಗಳ ಎರಡು ಮಂದೆ ಅಥವಾ ಹಿಂಡುಗಳ ನಡುವೆ.] ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು. [QBR]
ಆದಿಕಾಂಡ 49 : 15 (IRVKN)
ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ [QBR] ಸುಖಾಸ್ಪದವೂ ಆಗಿರುವುದನ್ನು ಕಂಡನು. [QBR] ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು [QBR] ಬಿಟ್ಟೀ ಸೇವೆಮಾಡುವನು. [QBR]
ಆದಿಕಾಂಡ 49 : 16 (IRVKN)
ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ [QBR] ತನ್ನ ಜನರಿಗೆ ನ್ಯಾಯತೀರಿಸುವನು. [QBR]
ಆದಿಕಾಂಡ 49 : 17 (IRVKN)
ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು [QBR] ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. [QBR] ಸವಾರನು ಕೆಳಗೆ ಅಂಗಾತವಾಗಿ ಬೀಳುವನು. [QBR]
ಆದಿಕಾಂಡ 49 : 18 (IRVKN)
ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ. [QBR]
ಆದಿಕಾಂಡ 49 : 19 (IRVKN)
ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, [QBR] ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು. [QBR]
ಆದಿಕಾಂಡ 49 : 20 (IRVKN)
ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. [QBR] ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು. [QBR]
ಆದಿಕಾಂಡ 49 : 21 (IRVKN)
ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ. [QBR] ಅವನಿಂದ ಇಂಪಾದ ಮಾತುಗಳುಂಟಾಗುವವು. [QBR]
ಆದಿಕಾಂಡ 49 : 22 (IRVKN)
ಯೋಸೇಫನು ಫಲಭರಿತವಾದ ವೃಕ್ಷವು, [QBR] ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. [QBR] ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ. [QBR]
ಆದಿಕಾಂಡ 49 : 23 (IRVKN)
ಬಿಲ್ಲುಗಾರರು ಅವನನ್ನು ಆಕ್ರಮಿಸುವರು, [QBR] ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು. [QBR]
ಆದಿಕಾಂಡ 49 : 24 (IRVKN)
ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, [QBR] ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ [QBR] ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. [QBR] ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ. [QBR]
ಆದಿಕಾಂಡ 49 : 25 (IRVKN)
ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. [QBR] ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, [QBR] ಆತನು ಮೇಲಣ ಆಕಾಶದಿಂದಲೂ, [QBR] ಕೆಳಗಣ ಸಾಗರದ ಸೆಲೆಗಳಿಂದಲೂ, [QBR] ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ. [QBR]
ಆದಿಕಾಂಡ 49 : 26 (IRVKN)
[§ ನಿನ್ನ ತಂದೆಯ ಆಶೀರ್ವಾದಗಳು ಸದಾಕಾಲವಾಗಿರುವ ಬೆಟ್ಟಗಳಿಗಿಂತ ಮಿಗಿಲಾಗಿದೆ.] ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು. [QBR]
ಆದಿಕಾಂಡ 49 : 27 (IRVKN)
“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. [QBR] ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. [QBR] ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.
ಆದಿಕಾಂಡ 49 : 28 (IRVKN)
ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು. [PS]
ಆದಿಕಾಂಡ 49 : 29 (IRVKN)
{ಯಾಕೋಬನ ಮರಣ ಮತ್ತು ಸಮಾಧಿ} [PS] ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.
ಆದಿಕಾಂಡ 49 : 30 (IRVKN)
ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.
ಆದಿಕಾಂಡ 49 : 31 (IRVKN)
ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.
ಆದಿಕಾಂಡ 49 : 32 (IRVKN)
ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು” ಎಂದನು. [PE][PS]
ಆದಿಕಾಂಡ 49 : 33 (IRVKN)
ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: