ಆದಿಕಾಂಡ 5 : 1 (IRVKN)
{ಆದಾಮನ ವಂಶಾವಳಿ} (1ಪೂರ್ವ 1:1-4) [PS] ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
ಆದಿಕಾಂಡ 5 : 2 (IRVKN)
ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು. [PE][PS]
ಆದಿಕಾಂಡ 5 : 3 (IRVKN)
ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
ಆದಿಕಾಂಡ 5 : 4 (IRVKN)
ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.
ಆದಿಕಾಂಡ 5 : 5 (IRVKN)
ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು. [PE][PS]
ಆದಿಕಾಂಡ 5 : 6 (IRVKN)
ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು.
ಆದಿಕಾಂಡ 5 : 7 (IRVKN)
ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
ಆದಿಕಾಂಡ 5 : 8 (IRVKN)
ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು. [PE][PS]
ಆದಿಕಾಂಡ 5 : 9 (IRVKN)
ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.
ಆದಿಕಾಂಡ 5 : 10 (IRVKN)
ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.
ಆದಿಕಾಂಡ 5 : 11 (IRVKN)
ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು. [PE][PS]
ಆದಿಕಾಂಡ 5 : 12 (IRVKN)
ಕೇನಾನನು ಎಪ್ಪತ್ತು ವರ್ಷದವನಾದಾಗ, [* ಮಹಲಲೇಲ ಎಂದರೆ ದೇವರಿಗೆ ಸ್ತೋತ್ರ.] ಮಹಲಲೇಲನನ್ನು ಪಡೆದನು.
ಆದಿಕಾಂಡ 5 : 13 (IRVKN)
ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.
ಆದಿಕಾಂಡ 5 : 14 (IRVKN)
ಕೇನಾನನು ಒಟ್ಟು ಒಂಭೈನೂರ ಹತ್ತು ವರ್ಷ ಬದುಕಿ ನಂತರ ಸತ್ತನು. [PE][PS]
ಆದಿಕಾಂಡ 5 : 15 (IRVKN)
ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು.
ಆದಿಕಾಂಡ 5 : 16 (IRVKN)
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು. [PE][PS]
ಆದಿಕಾಂಡ 5 : 17 (IRVKN)
ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು. [PE][PS]
ಆದಿಕಾಂಡ 5 : 18 (IRVKN)
ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು.
ಆದಿಕಾಂಡ 5 : 19 (IRVKN)
ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು.
ಆದಿಕಾಂಡ 5 : 20 (IRVKN)
ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು. [PE][PS]
ಆದಿಕಾಂಡ 5 : 21 (IRVKN)
ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.
ಆದಿಕಾಂಡ 5 : 22 (IRVKN)
ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.
ಆದಿಕಾಂಡ 5 : 23 (IRVKN)
ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು.
ಆದಿಕಾಂಡ 5 : 24 (IRVKN)
ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು. [PE][PS]
ಆದಿಕಾಂಡ 5 : 25 (IRVKN)
ಮೆತೂಷೆಲಹನು ನೂರ ಎಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು.
ಆದಿಕಾಂಡ 5 : 26 (IRVKN)
ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.
ಆದಿಕಾಂಡ 5 : 27 (IRVKN)
ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು. [PE][PS]
ಆದಿಕಾಂಡ 5 : 28 (IRVKN)
ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.
ಆದಿಕಾಂಡ 5 : 29 (IRVKN)
ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
ಆದಿಕಾಂಡ 5 : 30 (IRVKN)
ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.
ಆದಿಕಾಂಡ 5 : 31 (IRVKN)
ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು. [PE][PS]
ಆದಿಕಾಂಡ 5 : 32 (IRVKN)
ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32

BG:

Opacity:

Color:


Size:


Font: