ಆದಿಕಾಂಡ 50 : 1 (IRVKN)
ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.
ಆದಿಕಾಂಡ 50 : 2 (IRVKN)
ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
ಆದಿಕಾಂಡ 50 : 3 (IRVKN)
ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು. [PE][PS]
ಆದಿಕಾಂಡ 50 : 4 (IRVKN)
ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,
ಆದಿಕಾಂಡ 50 : 5 (IRVKN)
‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’ ” ಎಂದನು. [PE][PS]
ಆದಿಕಾಂಡ 50 : 6 (IRVKN)
ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು. [PE][PS]
ಆದಿಕಾಂಡ 50 : 7 (IRVKN)
ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ
ಆದಿಕಾಂಡ 50 : 8 (IRVKN)
ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.
ಆದಿಕಾಂಡ 50 : 9 (IRVKN)
ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು. [PE][PS]
ಆದಿಕಾಂಡ 50 : 10 (IRVKN)
ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
ಆದಿಕಾಂಡ 50 : 11 (IRVKN)
ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ [* ಐಗುಪ್ತ್ಯರ ಶೋಕ.] ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು. [PE][PS]
ಆದಿಕಾಂಡ 50 : 12 (IRVKN)
ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.
ಆದಿಕಾಂಡ 50 : 13 (IRVKN)
ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು. [PE][PS]
ಆದಿಕಾಂಡ 50 : 14 (IRVKN)
ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು. [PS]
ಆದಿಕಾಂಡ 50 : 15 (IRVKN)
{ಯೋಸೇಫನು ತನ್ನ ಸಹೋದರರನ್ನು ಕ್ಷಮಿಸಿದ್ದು} [PS] ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಆದಿಕಾಂಡ 50 : 16 (IRVKN)
ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,
ಆದಿಕಾಂಡ 50 : 17 (IRVKN)
“ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು. [PE][PS]
ಆದಿಕಾಂಡ 50 : 18 (IRVKN)
ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.
ಆದಿಕಾಂಡ 50 : 19 (IRVKN)
ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?
ಆದಿಕಾಂಡ 50 : 20 (IRVKN)
ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
ಆದಿಕಾಂಡ 50 : 21 (IRVKN)
ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು. [PS]
ಆದಿಕಾಂಡ 50 : 22 (IRVKN)
{ಯೋಸೇಫನ ಅಂತ್ಯ ದಿನಗಳು ಮತ್ತು ಮರಣ} [PS] ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
ಆದಿಕಾಂಡ 50 : 23 (IRVKN)
ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು. [PE][PS]
ಆದಿಕಾಂಡ 50 : 24 (IRVKN)
ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
ಆದಿಕಾಂಡ 50 : 25 (IRVKN)
ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು. [PE][PS]
ಆದಿಕಾಂಡ 50 : 26 (IRVKN)
ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: