ಆದಿಕಾಂಡ 6 : 1 (IRVKN)
ಮನುಷ್ಯರ ಕೆಟ್ಟತನ ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು
ಆದಿಕಾಂಡ 6 : 2 (IRVKN)
ಸೌಂದರ್ಯವುಳ್ಳವರಾಗಿರುವುದನ್ನು ನೋಡಿ * ಪರಲೋಕದ ಆತ್ಮಗಳು. ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
ಆದಿಕಾಂಡ 6 : 3 (IRVKN)
ಆಗ ಯೆಹೋವನು, “ ಜೀವವನ್ನು ನೀಡುವ ಆತ್ಮ. ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
ಆದಿಕಾಂಡ 6 : 4 (IRVKN)
ಆದಿಕಾಂಡ 6 : 5 (IRVKN)
ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು. ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
ಆದಿಕಾಂಡ 6 : 6 (IRVKN)
ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
ಆದಿಕಾಂಡ 6 : 7 (IRVKN)
ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
ಆದಿಕಾಂಡ 6 : 8 (IRVKN)
ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.
ಆದಿಕಾಂಡ 6 : 9 (IRVKN)
ನೋಹನ ಚರಿತ್ರೆ ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
ಆದಿಕಾಂಡ 6 : 10 (IRVKN)
ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
ಆದಿಕಾಂಡ 6 : 11 (IRVKN)
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.
ಆದಿಕಾಂಡ 6 : 12 (IRVKN)
ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
ಆದಿಕಾಂಡ 6 : 13 (IRVKN)
ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
ಆದಿಕಾಂಡ 6 : 14 (IRVKN)
ನೀನು ನಿನಗೋಸ್ಕರ ತುರಾಯಿ ಮರದಿಂದ ಪೆಟ್ಟಿಗೆ ಅಥವಾ ಮಂಜೂಷ. ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
ಆದಿಕಾಂಡ 6 : 15 (IRVKN)
ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.
ಆದಿಕಾಂಡ 6 : 16 (IRVKN)
ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
ಆದಿಕಾಂಡ 6 : 17 (IRVKN)
ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
ಆದಿಕಾಂಡ 6 : 18 (IRVKN)
“ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.
ಆದಿಕಾಂಡ 6 : 19 (IRVKN)
ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
ಆದಿಕಾಂಡ 6 : 20 (IRVKN)
ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
ಆದಿಕಾಂಡ 6 : 21 (IRVKN)
ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.
ಆದಿಕಾಂಡ 6 : 22 (IRVKN)
ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22