ಆದಿಕಾಂಡ 7 : 1 (IRVKN)
{ಜಲಪ್ರಳಯ} [PS] ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
ಆದಿಕಾಂಡ 7 : 2 (IRVKN)
ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.
ಆದಿಕಾಂಡ 7 : 3 (IRVKN)
ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.
ಆದಿಕಾಂಡ 7 : 4 (IRVKN)
ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು. [PE][PS]
ಆದಿಕಾಂಡ 7 : 5 (IRVKN)
ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು. [PE][PS]
ಆದಿಕಾಂಡ 7 : 6 (IRVKN)
ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು.
ಆದಿಕಾಂಡ 7 : 7 (IRVKN)
ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು.
ಆದಿಕಾಂಡ 7 : 8 (IRVKN)
ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ
ಆದಿಕಾಂಡ 7 : 9 (IRVKN)
ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.
ಆದಿಕಾಂಡ 7 : 10 (IRVKN)
ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು. [PE][PS]
ಆದಿಕಾಂಡ 7 : 11 (IRVKN)
ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
ಆದಿಕಾಂಡ 7 : 12 (IRVKN)
ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು. [PE][PS]
ಆದಿಕಾಂಡ 7 : 13 (IRVKN)
ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.
ಆದಿಕಾಂಡ 7 : 14 (IRVKN)
ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ
ಆದಿಕಾಂಡ 7 : 15 (IRVKN)
ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.
ಆದಿಕಾಂಡ 7 : 16 (IRVKN)
ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು. [PE][PS]
ಆದಿಕಾಂಡ 7 : 17 (IRVKN)
ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.
ಆದಿಕಾಂಡ 7 : 18 (IRVKN)
ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.
ಆದಿಕಾಂಡ 7 : 19 (IRVKN)
ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.
ಆದಿಕಾಂಡ 7 : 20 (IRVKN)
ನೀರು ಆ ಬೆಟ್ಟಗಳಿಂತಲೂ [* ಏಳು ಮೀಟರುಗಳು.] ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,
ಆದಿಕಾಂಡ 7 : 21 (IRVKN)
ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು. [PE][PS]
ಆದಿಕಾಂಡ 7 : 22 (IRVKN)
ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು.
ಆದಿಕಾಂಡ 7 : 23 (IRVKN)
ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು. [PE][PS]
ಆದಿಕಾಂಡ 7 : 24 (IRVKN)
ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: