ಆದಿಕಾಂಡ 8 : 1 (IRVKN)
{ಜಲಪ್ರಳಯದ ಅಂತ್ಯ} [PS] ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
ಆದಿಕಾಂಡ 8 : 2 (IRVKN)
ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.
ಆದಿಕಾಂಡ 8 : 3 (IRVKN)
ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.
ಆದಿಕಾಂಡ 8 : 4 (IRVKN)
ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.
ಆದಿಕಾಂಡ 8 : 5 (IRVKN)
ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು. [PE][PS]
ಆದಿಕಾಂಡ 8 : 6 (IRVKN)
ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.
ಆದಿಕಾಂಡ 8 : 7 (IRVKN)
ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
ಆದಿಕಾಂಡ 8 : 8 (IRVKN)
ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.
ಆದಿಕಾಂಡ 8 : 9 (IRVKN)
ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
ಆದಿಕಾಂಡ 8 : 10 (IRVKN)
ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.
ಆದಿಕಾಂಡ 8 : 11 (IRVKN)
ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
ಆದಿಕಾಂಡ 8 : 12 (IRVKN)
ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ. [PE][PS]
ಆದಿಕಾಂಡ 8 : 13 (IRVKN)
ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
ಆದಿಕಾಂಡ 8 : 14 (IRVKN)
ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು. [PE][PS]
ಆದಿಕಾಂಡ 8 : 15 (IRVKN)
ಆಗ ದೇವರು ನೋಹನಿಗೆ,
ಆದಿಕಾಂಡ 8 : 16 (IRVKN)
“ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
ಆದಿಕಾಂಡ 8 : 17 (IRVKN)
ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
ಆದಿಕಾಂಡ 8 : 18 (IRVKN)
ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.
ಆದಿಕಾಂಡ 8 : 19 (IRVKN)
ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು. [PS]
ಆದಿಕಾಂಡ 8 : 20 (IRVKN)
{ನೋಹನು ಯೆಹೋವನನ್ನು ಆರಾಧಿಸಿದ್ದು} [PS] ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
ಆದಿಕಾಂಡ 8 : 21 (IRVKN)
ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
ಆದಿಕಾಂಡ 8 : 22 (IRVKN)
ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: