ಹಬಕ್ಕೂಕ್ಕ 1 : 1 (IRVKN)
ಹಬಕ್ಕೂಕನ ದೂರು ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ.
ಹಬಕ್ಕೂಕ್ಕ 1 : 2 (IRVKN)
ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.
ಹಬಕ್ಕೂಕ್ಕ 1 : 3 (IRVKN)
ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.
ಹಬಕ್ಕೂಕ್ಕ 1 : 4 (IRVKN)
ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.
ಹಬಕ್ಕೂಕ್ಕ 1 : 5 (IRVKN)
ದೇವರ ಉತ್ತರ ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.
ಹಬಕ್ಕೂಕ್ಕ 1 : 6 (IRVKN)
ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ* ಕಸ್ದೀಯ ಅಥವಾ ಬಾಬೆಲ್. ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.
ಹಬಕ್ಕೂಕ್ಕ 1 : 7 (IRVKN)
ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.
ಹಬಕ್ಕೂಕ್ಕ 1 : 8 (IRVKN)
ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.
ಹಬಕ್ಕೂಕ್ಕ 1 : 9 (IRVKN)
ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.
ಹಬಕ್ಕೂಕ್ಕ 1 : 10 (IRVKN)
ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.
ಹಬಕ್ಕೂಕ್ಕ 1 : 11 (IRVKN)
ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.
ಹಬಕ್ಕೂಕ್ಕ 1 : 12 (IRVKN)
ಪ್ರವಾದಿಯ ಮತ್ತೊಂದು ಆಕ್ಷೇಪಣೆ ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.
ಹಬಕ್ಕೂಕ್ಕ 1 : 13 (IRVKN)
ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?
ಹಬಕ್ಕೂಕ್ಕ 1 : 14 (IRVKN)
ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ?
ಹಬಕ್ಕೂಕ್ಕ 1 : 15 (IRVKN)
ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?
ಹಬಕ್ಕೂಕ್ಕ 1 : 16 (IRVKN)
ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.
ಹಬಕ್ಕೂಕ್ಕ 1 : 17 (IRVKN)
ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
❮
❯
1
2
3
4
5
6
7
8
9
10
11
12
13
14
15
16
17