ಹಬಕ್ಕೂಕ್ಕ 3 : 2 (IRVKN)
ಶಿಗ್ಯೋನೋತ್ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.
ಹಬಕ್ಕೂಕ್ಕ 3 : 3 (IRVKN)
ತೇಮಾನಿನಿಂದ* ತೇಮಾನಿನಿಂದ ತೇಮಾನ್ ಎದೋಮ್ ದೇಶದ ಜಿಲ್ಲೆಯಾಗಿದ್ದು, ಯೆಹೂದದ ದಕ್ಷಿಣ ಭಾಗದ ಕಡೆಯಲ್ಲಿತ್ತು. ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ [† ಪಾರಾನ್ ಪರ್ವತದಿಂದ ಪಾರಾನ್ ಪರ್ವತವು ಬಂಜರುಬರಡು ಸ್ಥಳವಾಗಿತ್ತು, ಅದು ಸೀನಾಯಿ ಗಡಿಪ್ರದೇಶಭೂಪ್ರದೇಶದಲ್ಲಿ ಇತ್ತು. ] ಬರುತ್ತಾನೆ; QSS ಸೆಲಾ.SE ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;
ಹಬಕ್ಕೂಕ್ಕ 3 : 4 (IRVKN)
ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.
ಹಬಕ್ಕೂಕ್ಕ 3 : 5 (IRVKN)
ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ.
ಹಬಕ್ಕೂಕ್ಕ 3 : 6 (IRVKN)
ಆತನು ನಿಂತುಕೊಳ್ಳಲು ಭೂಮಿಯು ಅಳೆದನು.‡ ಅಳೆದನು. ಕಂಪಿಸುವಂತೆ ಮಾಡಿದನು ಅಥವಾ ಅಲುಗಾಡಿಸಿದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.
ಹಬಕ್ಕೂಕ್ಕ 3 : 7 (IRVKN)
ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.
ಹಬಕ್ಕೂಕ್ಕ 3 : 8 (IRVKN)
ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!
ಹಬಕ್ಕೂಕ್ಕ 3 : 9 (IRVKN)
ನಿನ್ನ ಬಿಲ್ಲು ಈಚೆಗೆ ತೆಗೆಯಲ್ಪಟ್ಟಿದೆ. ಆಹಾ, ನಿನ್ನ ತೋಳ್ಬಲದಿಂದ ಪ್ರಯೋಗಿಸಿದ ಬಾಣಗಳ ಬಲವು ಜೀವಬುಗ್ಗೆಯನ್ನು ಭೂಮಿಯೊಳಗಿನಿಂದ ಹರಿದು ಬರುವಂತೆ ಮಾಡಿತು. QSS ಸೆಲಾ.SE
ಹಬಕ್ಕೂಕ್ಕ 3 : 10 (IRVKN)
ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು§ ಅಲೆಗಳನ್ನು ಅಥವಾ ಕೈಗಳನ್ನು. ಮೇಲಕ್ಕೆ ಎತ್ತುತ್ತದೆ.
ಹಬಕ್ಕೂಕ್ಕ 3 : 11 (IRVKN)
ಹಾರಿ ಬರುವ ನಿನ್ನ ಹಾರುವ ಬಾಣಗಳ ಬೆಳಕಿಗೆ, ಥಳಥಳಿಸುವ ನಿನ್ನ ಮಿಂಚುವ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.
ಹಬಕ್ಕೂಕ್ಕ 3 : 12 (IRVKN)
ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ.
ಹಬಕ್ಕೂಕ್ಕ 3 : 13 (IRVKN)
ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. QSS ಸೆಲಾ.SE
ಹಬಕ್ಕೂಕ್ಕ 3 : 14 (IRVKN)
ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು* ತಲೆಯನ್ನು ಅಥವಾ ಸೇನಾಧಿಪತಿಯನ್ನು. ಅವನ ದೊಣ್ಣೆಗಳಿಂದಲೇ ಒಡೆದಿದ್ದೀ
ಹಬಕ್ಕೂಕ್ಕ 3 : 15 (IRVKN)
ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ.
ಹಬಕ್ಕೂಕ್ಕ 3 : 16 (IRVKN)
ಪ್ರವಾದಿಯ ಭಯವೂ ಭರವಸವೂ ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.
ಹಬಕ್ಕೂಕ್ಕ 3 : 17 (IRVKN)
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
ಹಬಕ್ಕೂಕ್ಕ 3 : 18 (IRVKN)
ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.
ಹಬಕ್ಕೂಕ್ಕ 3 : 19 (IRVKN)
ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ಬೆಟ್ಟ ಗುಡ್ಡಗಳನ್ನು ಚುರುಕಾಗಿ ಓಡಲು ನನ್ನನ್ನು ಸಮರ್ಥನನ್ನಾಗಿಸುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
❮
❯
1
2
3
4
5
6
7
8
9
10
11
12
13
14
15
16
17
18
19