ಹಗ್ಗಾಯ 1 : 1 (IRVKN)
ಹಗ್ಗಾಯ 1 : 2 (IRVKN)
ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು. ದೇವಾಲಯವನ್ನು ಪುನಃ ಕಟ್ಟಲು ಎಚ್ಚರಿಕೆ
ಹಗ್ಗಾಯ 1 : 3 (IRVKN)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.
ಹಗ್ಗಾಯ 1 : 4 (IRVKN)
ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು, “ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?”
ಹಗ್ಗಾಯ 1 : 5 (IRVKN)
ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
ಹಗ್ಗಾಯ 1 : 6 (IRVKN)
ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”
ಹಗ್ಗಾಯ 1 : 7 (IRVKN)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
ಹಗ್ಗಾಯ 1 : 8 (IRVKN)
ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.
ಹಗ್ಗಾಯ 1 : 9 (IRVKN)
ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”
ಹಗ್ಗಾಯ 1 : 10 (IRVKN)
ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;
ಹಗ್ಗಾಯ 1 : 11 (IRVKN)
ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.
ಹಗ್ಗಾಯ 1 : 12 (IRVKN)
ದೈವಾಜ್ಞೆಯ ಪಾಲನೆ
ಹಗ್ಗಾಯ 1 : 13 (IRVKN)
ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ* ಇಸ್ರಾಯೇಲ್ ಜನಶೇಷ ಬಾಬಿಲೋನಿನ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರಾಯೇಲ್ ಜನರು. , ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
ಹಗ್ಗಾಯ 1 : 14 (IRVKN)
ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.” ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,
ಹಗ್ಗಾಯ 1 : 15 (IRVKN)
ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.

1 2 3 4 5 6 7 8 9 10 11 12 13 14 15