ಇಬ್ರಿಯರಿಗೆ 7 : 1 (IRVKN)
{ಯೇಸು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ಲೇವಿವಂಶದ ಯಾಜಕರಿಗಿಂತಲೂ ಶ್ರೇಷ್ಠನು} [PS] [* ಆದಿ 14:17-20:] ಈ ಮೆಲ್ಕಿಜೆದೇಕನು [† ಆದಿ 33:18; ಕೀರ್ತ 76:2:] ಸಾಲೇಮಿನ ಅರಸನೂ [‡ ಅರಣ್ಯ 24:16; ಧರ್ಮೋ 32:8; ಮಾರ್ಕ 5:7:] ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
ಇಬ್ರಿಯರಿಗೆ 7 : 2 (IRVKN)
ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.
ಇಬ್ರಿಯರಿಗೆ 7 : 3 (IRVKN)
ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. [§ ಅಥವಾ, ಅವನು ಹುಟ್ಟಿದ್ದಾಗಲಿ ಕಾಲವಾಗಿ ಹೋದದ್ದಾಗಲಿ ಬರೆದಿಲ್ಲ. ವ. 6:] ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, [* ಕೀರ್ತ 110:4:] ನಿರಂತರವಾಗಿ ಯಾಜಕನಾಗಿರುವನು.
ಇಬ್ರಿಯರಿಗೆ 7 : 4 (IRVKN)
ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. [† ಅ. ಕೃ. 7:8,9:] ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.
ಇಬ್ರಿಯರಿಗೆ 7 : 5 (IRVKN)
ನಿಜವಾಗಿಯೂ [‡ ಅರಣ್ಯ 18:21,26; 2 ಪೂರ್ವ 31:4,5:] ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.
ಇಬ್ರಿಯರಿಗೆ 7 : 6 (IRVKN)
ಆದರೆ ಮೆಲ್ಕಿಜೆದೇಕನು ಲೇವಿಯ [§ ವ. 3:] ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ [* ರೋಮಾ. 4:13:] ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.
ಇಬ್ರಿಯರಿಗೆ 7 : 7 (IRVKN)
ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ.
ಇಬ್ರಿಯರಿಗೆ 7 : 8 (IRVKN)
ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು [† ಇಬ್ರಿ. 5:6; 6:20; ಲೂಕ 24:5:] ಚಿರಂಜೀವಿಯಾಗಿರುವನು.
ಇಬ್ರಿಯರಿಗೆ 7 : 9 (IRVKN)
ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು.
ಇಬ್ರಿಯರಿಗೆ 7 : 10 (IRVKN)
ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು. [PE][PS]
ಇಬ್ರಿಯರಿಗೆ 7 : 11 (IRVKN)
ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ [‡ ಇಬ್ರಿ. 7:18,19; 8:7; ಗಲಾ. 2:21:] ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
ಇಬ್ರಿಯರಿಗೆ 7 : 12 (IRVKN)
ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ.
ಇಬ್ರಿಯರಿಗೆ 7 : 13 (IRVKN)
ಆದರೆ [§ ಎಂದರೆ ಕೀರ್ತ 110:4:] ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ.
ಇಬ್ರಿಯರಿಗೆ 7 : 14 (IRVKN)
[* ಯೆಶಾ 11:1; ಮೀಕ 5:2; ಮತ್ತಾ 1:3; ಲೂಕ 3:33; ಪ್ರಕ 5:5:] ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.
ಇಬ್ರಿಯರಿಗೆ 7 : 15 (IRVKN)
(15-16) ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ.
ಇಬ್ರಿಯರಿಗೆ 7 : 16 (IRVKN)
ಆತನ ವಿಷಯದಲ್ಲಿ [† ಕೀರ್ತ 110:4; ಇಬ್ರಿ. 5:6; 7:21:] “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ.
ಇಬ್ರಿಯರಿಗೆ 7 : 17 (IRVKN)
ಯಾಕೆಂದರೆ ಮೊದಲಿದ್ದ ಆಜ್ಞೆಯು [‡ ರೋಮಾ. 8:3; ಗಲಾ. 4:9:] ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.
ಇಬ್ರಿಯರಿಗೆ 7 : 18 (IRVKN)
[§ ಇಬ್ರಿ. 9:9; 10:1; ಯಾಜ 16:16; ಅ. ಕೃ. 13:39:] ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ [* ಇಬ್ರಿ. 6:18:] ಉತ್ತಮವಾದ ಹೊಸ [† ವ. 25; ಇಬ್ರಿ. 4:16:] ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.
ಇಬ್ರಿಯರಿಗೆ 7 : 19 (IRVKN)
ಇದು ಪ್ರತಿಜ್ಞೆ ರಹಿತವಾದ್ದದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು.
ಇಬ್ರಿಯರಿಗೆ 7 : 20 (IRVKN)
ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ [QBR] [‡ ವ. 17:] “ ‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು [QBR2] ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.
ಇಬ್ರಿಯರಿಗೆ 7 : 21 (IRVKN)
ಯೇಸು ಪ್ರತಿಜ್ಞೆಯೊಡನೆಯೇ [§ ಇಬ್ರಿ. 8:6:] ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.
ಇಬ್ರಿಯರಿಗೆ 7 : 22 (IRVKN)
ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು.
ಇಬ್ರಿಯರಿಗೆ 7 : 23 (IRVKN)
[* ಇಬ್ರಿ. 7:21,28:] ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು.
ಇಬ್ರಿಯರಿಗೆ 7 : 24 (IRVKN)
ಆದಕಾರಣ ಆತನು [† ವ. 19; ಯೋಹಾ 14:6:] ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ [‡ ಇಬ್ರಿ. 9:24; ರೋಮಾ. 8:34:] ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ. [PE][PS]
ಇಬ್ರಿಯರಿಗೆ 7 : 25 (IRVKN)
ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು [§ ಕೀರ್ತ 16:10; ಪ್ರಕ 15:4; 16:5:] ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, [* ಇಬ್ರಿ. 4:15:] ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, [† ಇಬ್ರಿ. 8:1; 4:14:] ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
ಇಬ್ರಿಯರಿಗೆ 7 : 26 (IRVKN)
[‡ ಇಬ್ರಿ. 5:3:] ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು [§ ಇಬ್ರಿ. 9:12,28; 10:10:] ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
ಇಬ್ರಿಯರಿಗೆ 7 : 27 (IRVKN)
ಧರ್ಮಶಾಸ್ತ್ರವು [* ಇಬ್ರಿ. 5:2:] ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ [† ಇಬ್ರಿ. 2:10; 5:9:] ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. [PE]
ಇಬ್ರಿಯರಿಗೆ 7 : 28 (IRVKN)

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: