ಇಬ್ರಿಯರಿಗೆ 8 : 1 (IRVKN)
ಯೇಸುವಿನ ಯಾಜಕತ್ವವು ಶಾಶ್ವತವಾದದ್ದು ನಾವು ಈಗ ಹೇಳುವ ಸಂಗತಿಗಳಲ್ಲಿ * ಅಥವಾ, ಮಾತೇನಂದರೆ, ಇಂಥ ಮಹಾಯಾಜಕನೇ ನಮಗಿದ್ದಾನೆ; ಈತನು ಪರಲೋಕದೊಳಗೆ ಬಲಪಾರ್ಶ್ವದಲ್ಲಿ ಕುಳಿತಿದ್ದು ಪವಿತ್ರಸ್ಥಾನದಲ್ಲಿ. ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ † ಮಾರ್ಕ 16:19: ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
ಇಬ್ರಿಯರಿಗೆ 8 : 2 (IRVKN)
ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ಇಬ್ರಿ. 9:11, 24: ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
ಇಬ್ರಿಯರಿಗೆ 8 : 3 (IRVKN)
§ ಇಬ್ರಿ. 5:1: ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ * ಇಬ್ರಿ. 9:12-14; 10:9-12; ಎಫೆ 5:2: ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.
ಇಬ್ರಿಯರಿಗೆ 8 : 4 (IRVKN)
ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.
ಇಬ್ರಿಯರಿಗೆ 8 : 5 (IRVKN)
ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು [† ವಿಮೋ 25: 40 ]ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಇಬ್ರಿ. 9:23: ಪ್ರತಿರೂಪವೂ, § ಇಬ್ರಿ. 10:1; ಕೊಲೊ 2:17: ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
ಇಬ್ರಿಯರಿಗೆ 8 : 6 (IRVKN)
ಆದರೆ ಯೇಸು ಕ್ರಿಸ್ತನು ಅದಕ್ಕಿಂತ * ಇಬ್ರಿ. 1:4; 2 ಕೊರಿ 3:6-11: ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ † ಇಬ್ರಿ. 7:22: ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
ಇಬ್ರಿಯರಿಗೆ 8 : 7 (IRVKN)
ಇಬ್ರಿ. 7:11: ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ.
ಇಬ್ರಿಯರಿಗೆ 8 : 8 (IRVKN)
ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, § ಯೆರೆ 31:31-34: “ ‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.
ಇಬ್ರಿಯರಿಗೆ 8 : 9 (IRVKN)
‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.
ಇಬ್ರಿಯರಿಗೆ 8 : 10 (IRVKN)
* ಇಬ್ರಿ. 10:16; ರೋಮಾ. 11:27: ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು 2 ಕೊರಿ 3:3: ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.
ಇಬ್ರಿಯರಿಗೆ 8 : 11 (IRVKN)
ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಯೆಶಾ 54:13; ಯೋಹಾ 6:45; 1 ಯೋಹಾ 2:27: ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.
ಇಬ್ರಿಯರಿಗೆ 8 : 12 (IRVKN)
ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು § ಇಬ್ರಿ. 10:17; ರೋಮಾ. 11:27: ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’ ” ಎಂದು ಕರ್ತನು ನುಡಿಯುತ್ತಾನೆ.
ಇಬ್ರಿಯರಿಗೆ 8 : 13 (IRVKN)
13 ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು * 2 ಕೊರಿ 5:17: ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.

1 2 3 4 5 6 7 8 9 10 11 12 13