ಹೋಶೇ 1 : 1 (IRVKN)
{ಹೋಶೇಯನ ಪತ್ನಿಯ ಪತಿದ್ರೋಹ} [PS] ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.
ಹೋಶೇ 1 : 2 (IRVKN)
{ಹೋಶೇಯನ ಮದುವೆ ಮತ್ತು ಮೂವರು ಮಕ್ಕಳು ಜನಿಸಿದ್ದು} [PS] ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. [QBR] ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು. [QBR]
ಹೋಶೇ 1 : 3 (IRVKN)
ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು. [QBR]
ಹೋಶೇ 1 : 4 (IRVKN)
ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ [* ಇಜ್ರೇಲ್ ಅಂದರೆ ದೇವರು ಬಿತ್ತುತ್ತಾನೆ. ಈ ಇಜ್ರೇಲ್ ಪಟ್ಟಣದಲ್ಲಿ ಯೇಹು ಇಸ್ರಾಯೇಲಿನ ಅರಸನನ್ನು ಮತ್ತು ಅವನ ಎಲ್ಲಾ ರಾಜಮನೆತನದ ಜನರನ್ನು ಕೊಂದುಹಾಕಿದನು ಮತ್ತು ಹೊಸ ಆಡಳಿತದ ಮೊದಲ ಅರಸನಾದನು. 2 ಅರಸು. 9-10 ಅಧ್ಯಾಯಗಳನ್ನು ನೋಡಿರಿ.] ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು. [QBR]
ಹೋಶೇ 1 : 5 (IRVKN)
ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು” ಎಂದನು. [QBR]
ಹೋಶೇ 1 : 6 (IRVKN)
ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ [† ಲೋ ರುಹಾಮ ವಾತ್ಸಲ್ಯರಹಿತ.] ’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ. [QBR]
ಹೋಶೇ 1 : 7 (IRVKN)
ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು. [QBR]
ಹೋಶೇ 1 : 8 (IRVKN)
ಆ ಕೂಸು ಮೊಲೆ ಬಿಟ್ಟ ಮೇಲೆ ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದಳು. [QBR]
ಹೋಶೇ 1 : 9 (IRVKN)
ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ [‡ ಲೋ ಅಮ್ಮಿ ನನ್ನ ಪ್ರಜೆಗಳಲ್ಲ.] ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.
ಹೋಶೇ 1 : 10 (IRVKN)
{ಇಸ್ರಾಯೇಲಿನ ಮುಂದಿನ ಸುಸ್ಥಿತಿ} [PS] ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. [QBR] ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು. [QBR]
ಹೋಶೇ 1 : 11 (IRVKN)
ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು [§ ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು ದೇವರು ತನ್ನ ಜನರನ್ನು ಪುನಃ ನೆಡುವನು.] . [PE]

1 2 3 4 5 6 7 8 9 10 11

BG:

Opacity:

Color:


Size:


Font: