ಹೋಶೇ 11 : 1 (IRVKN)
ದೇವರ ಪುತ್ರವಾತ್ಸಲ್ಯ ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.
ಹೋಶೇ 11 : 2 (IRVKN)
ನಾನು* ನಾನು ಅಥವಾ ಅವರು. ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.
ಹೋಶೇ 11 : 3 (IRVKN)
ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.
ಹೋಶೇ 11 : 4 (IRVKN)
ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.
ಹೋಶೇ 11 : 5 (IRVKN)
ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.
ಹೋಶೇ 11 : 6 (IRVKN)
ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.
ಹೋಶೇ 11 : 7 (IRVKN)
ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.
ಹೋಶೇ 11 : 8 (IRVKN)
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.
ಹೋಶೇ 11 : 9 (IRVKN)
ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ† ನಿನ್ನ ಬಳಿಗೆ ಪಟ್ಟಣಗಳಿಗೆ ವಿರುದ್ಧವಾಗಿ. ರೋಷದಿಂದ ಬಾರೆನು.
ಹೋಶೇ 11 : 10 (IRVKN)
ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;
ಹೋಶೇ 11 : 11 (IRVKN)
ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.
ಹೋಶೇ 11 : 12 (IRVKN)
ಇಸ್ರಾಯೇಲರ ಪಾಪ ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.
❮
❯
1
2
3
4
5
6
7
8
9
10
11
12