ಹೋಶೇ 14 : 1 (IRVKN)
ದೇವರ ಪ್ರೀತಿಪೂರ್ವಕವಾದ ವಾಗ್ದಾನಗಳು ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
ಹೋಶೇ 14 : 2 (IRVKN)
ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.* ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು. ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.
ಹೋಶೇ 14 : 3 (IRVKN)
ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.
ಹೋಶೇ 14 : 4 (IRVKN)
ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.
ಹೋಶೇ 14 : 5 (IRVKN)
ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.
ಹೋಶೇ 14 : 6 (IRVKN)
ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.
ಹೋಶೇ 14 : 7 (IRVKN)
ಅದರ ನೆರಳನ್ನು ಆಶ್ರಯಿಸಿರುವವರು† ಅದರ ನೆರಳನ್ನು ಆಶ್ರಯಿಸಿರುವವರು ಅವರು ಯೆಹೋವನ ನೆರಳಿನಲ್ಲಿ ವಾಸಿಸುವರು. ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.
ಹೋಶೇ 14 : 8 (IRVKN)
ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.
ಹೋಶೇ 14 : 9 (IRVKN)
ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.
❮
❯
1
2
3
4
5
6
7
8
9