ಹೋಶೇ 4 : 1 (IRVKN)
ಯಾಜಕ, ಪ್ರಭು ಮತ್ತು ಪ್ರಜೆಗಳ ದುರಾಚಾರ ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.
ಹೋಶೇ 4 : 2 (IRVKN)
ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.
ಹೋಶೇ 4 : 3 (IRVKN)
ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.
ಹೋಶೇ 4 : 4 (IRVKN)
ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ.
ಹೋಶೇ 4 : 5 (IRVKN)
ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.
ಹೋಶೇ 4 : 6 (IRVKN)
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
ಹೋಶೇ 4 : 7 (IRVKN)
ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.
ಹೋಶೇ 4 : 8 (IRVKN)
ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.
ಹೋಶೇ 4 : 9 (IRVKN)
ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.
ಹೋಶೇ 4 : 10 (IRVKN)
ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.
ಹೋಶೇ 4 : 11 (IRVKN)
ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.
ಹೋಶೇ 4 : 12 (IRVKN)
ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.
ಹೋಶೇ 4 : 13 (IRVKN)
ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?
ಹೋಶೇ 4 : 14 (IRVKN)
ವ್ಯಭಿಚಾರಿಣಿಯರಾಗಿ* ವ್ಯಭಿಚಾರಿಣಿಯರಾಗಿ “ಇವರು ಕಾನಾನ್ಯರ ವಿಗ್ರಹಾರಾಧನೆ (ದೇವಸ್ಥಾನ) ಸ್ಥಳಗಳಲ್ಲಿದ್ದರು ಮತ್ತು ಅವರು ಸಮೃದ್ಧಿಗೆ ಕಾರಣವಾಗಿದ್ದ ದೇವರನ್ನು ಪೂಜಿಸುತ್ತಿದ್ದರು. ಈ ಸ್ತ್ರೀಯರೊಂದಿಗೆ ದೈಹಿಕ ಸಂಬಂಧ (ಲೈಂಗಿಕ) ಇಟ್ಟುಕೊಳ್ಳುವುದು ಖಂಡಿತವಾಗಿಯೂ ತಮ್ಮ ಹೊಲಗಳಿಗೆ ಮತ್ತು ಕುರಿದನಗಳಿಗೆ ಸಮೃದ್ಧಿಯು ಉಂಟುಮಾಡುತ್ತದೆ ಎಂದು ಜನರು ನಂಬಿದ್ದರು. ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.
ಹೋಶೇ 4 : 15 (IRVKN)
ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.
ಹೋಶೇ 4 : 16 (IRVKN)
ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?
ಹೋಶೇ 4 : 17 (IRVKN)
ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.
ಹೋಶೇ 4 : 18 (IRVKN)
ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.
ಹೋಶೇ 4 : 19 (IRVKN)
ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.

1 2 3 4 5 6 7 8 9 10 11 12 13 14 15 16 17 18 19