ಹೋಶೇ 9 : 1 (IRVKN)
ಇಸ್ರಾಯೇಲರಿಗೆ ದಂಡನೆ ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.
ಹೋಶೇ 9 : 2 (IRVKN)
ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು.
ಹೋಶೇ 9 : 3 (IRVKN)
ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.* ಹೊಲಸಾದ ಆಹಾರವನ್ನು ತಿನ್ನುವರು. “ಕೆಲವು ಆಹಾರಗಳು ಸಂಸ್ಕಾರ ಸಂಬಂಧವಾಗಿ ಅಶುದ್ಧವಾದವು ಎಂದು ಮೋಶೆಯ ಧರ್ಮಶಾಸ್ತ್ರವು ಘೋಷಿಸುತ್ತದೆ ಹಾಗಾಗಿ ಅವುಗಳನ್ನು ತಿನ್ನಬಾರದು.
ಹೋಶೇ 9 : 4 (IRVKN)
ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.
ಹೋಶೇ 9 : 5 (IRVKN)
ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?
ಹೋಶೇ 9 : 6 (IRVKN)
ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.
ಹೋಶೇ 9 : 7 (IRVKN)
ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.
ಹೋಶೇ 9 : 8 (IRVKN)
ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ.
ಹೋಶೇ 9 : 9 (IRVKN)
ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.
ಹೋಶೇ 9 : 10 (IRVKN)
ಇಸ್ರಾಯೇಲಿನ ಕ್ಷಯ ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.
ಹೋಶೇ 9 : 11 (IRVKN)
ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.
ಹೋಶೇ 9 : 12 (IRVKN)
ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!
ಹೋಶೇ 9 : 13 (IRVKN)
ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.
ಹೋಶೇ 9 : 14 (IRVKN)
ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.
ಹೋಶೇ 9 : 15 (IRVKN)
ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.
ಹೋಶೇ 9 : 16 (IRVKN)
ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.
ಹೋಶೇ 9 : 17 (IRVKN)
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.
❮
❯
1
2
3
4
5
6
7
8
9
10
11
12
13
14
15
16
17