ಯೆಶಾಯ 10 : 1 (IRVKN)
ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
ಯೆಶಾಯ 10 : 2 (IRVKN)
ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
ಯೆಶಾಯ 10 : 3 (IRVKN)
ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
ಯೆಶಾಯ 10 : 4 (IRVKN)
ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
ಯೆಶಾಯ 10 : 5 (IRVKN)
ಯೆಹೋವನು ಅಶ್ಶೂರದಿಂದ ತನ್ನ ಜನರನ್ನು ದಂಡಿಸುವುದು ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
ಯೆಶಾಯ 10 : 6 (IRVKN)
ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
ಯೆಶಾಯ 10 : 7 (IRVKN)
ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
ಯೆಶಾಯ 10 : 8 (IRVKN)
ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
ಯೆಶಾಯ 10 : 9 (IRVKN)
ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
ಯೆಶಾಯ 10 : 10 (IRVKN)
ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
ಯೆಶಾಯ 10 : 11 (IRVKN)
ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.
ಯೆಶಾಯ 10 : 12 (IRVKN)
ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
ಯೆಶಾಯ 10 : 13 (IRVKN)
ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ* ಮಹಾವೀರನಂತೆ ಅಥವಾ ಹೋರಿಯಂತೆ. ಕೆಡವಿಬಿಟ್ಟಿದ್ದೇನೆ.
ಯೆಶಾಯ 10 : 14 (IRVKN)
ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.
ಯೆಶಾಯ 10 : 15 (IRVKN)
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
ಯೆಶಾಯ 10 : 16 (IRVKN)
ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
ಯೆಶಾಯ 10 : 17 (IRVKN)
ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
ಯೆಶಾಯ 10 : 18 (IRVKN)
ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
ಯೆಶಾಯ 10 : 19 (IRVKN)
ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.
ಯೆಶಾಯ 10 : 20 (IRVKN)
ಅಳಿದುಳಿದ ಇಸ್ರಾಯೇಲರು ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ† ಹೊಡೆದವನ ಅಂದರೆ ಅಶ್ಶೂರದ ಅರಸನ. ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
ಯೆಶಾಯ 10 : 21 (IRVKN)
ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.
ಯೆಶಾಯ 10 : 22 (IRVKN)
ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
ಯೆಶಾಯ 10 : 23 (IRVKN)
ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.
ಯೆಶಾಯ 10 : 24 (IRVKN)
ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
ಯೆಶಾಯ 10 : 25 (IRVKN)
ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
ಯೆಶಾಯ 10 : 26 (IRVKN)
ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.
ಯೆಶಾಯ 10 : 27 (IRVKN)
ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
ಯೆಶಾಯ 10 : 28 (IRVKN)
ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
ಯೆಶಾಯ 10 : 29 (IRVKN)
ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.
ಯೆಶಾಯ 10 : 30 (IRVKN)
ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!
ಯೆಶಾಯ 10 : 31 (IRVKN)
ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.
ಯೆಶಾಯ 10 : 32 (IRVKN)
ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
ಯೆಶಾಯ 10 : 33 (IRVKN)
ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
ಯೆಶಾಯ 10 : 34 (IRVKN)
ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34