ಯೆಶಾಯ 11 : 2 (IRVKN)
ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು. ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
ಯೆಶಾಯ 11 : 3 (IRVKN)
ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.
ಯೆಶಾಯ 11 : 4 (IRVKN)
ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
ಯೆಶಾಯ 11 : 5 (IRVKN)
ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.
ಯೆಶಾಯ 11 : 6 (IRVKN)
ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.
ಯೆಶಾಯ 11 : 7 (IRVKN)
ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು. ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು.
ಯೆಶಾಯ 11 : 8 (IRVKN)
ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.
ಯೆಶಾಯ 11 : 9 (IRVKN)
ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.
ಯೆಶಾಯ 11 : 10 (IRVKN)
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
ಯೆಶಾಯ 11 : 11 (IRVKN)
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ* ಸಮುದ್ರದ ಕರಾವಳಿ ದ್ವೀಪಗಳಿಂದಲೂ ಅಂದರೆ ಪ್ರಾರಂಭ ಪ್ರಾಚೀನ ಕಾಲದಲ್ಲಿ ದೂರವಿರುವ ದೇಶಗಳು ಎಂದರ್ಥ. ಉಳಿದವರನ್ನು ಬರಮಾಡಿಕೊಳ್ಳುವನು.
ಯೆಶಾಯ 11 : 12 (IRVKN)
ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
ಯೆಶಾಯ 11 : 13 (IRVKN)
ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.
ಯೆಶಾಯ 11 : 14 (IRVKN)
ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.
ಯೆಶಾಯ 11 : 15 (IRVKN)
ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.
ಯೆಶಾಯ 11 : 16 (IRVKN)
ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.
❮
❯
1
2
3
4
5
6
7
8
9
10
11
12
13
14
15
16