ಯೆಶಾಯ 12 : 1 (IRVKN)
ಯೆಹೋವನ ಸ್ತೋತ್ರಗೀತೆಗಳು ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
ಯೆಶಾಯ 12 : 2 (IRVKN)
ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
ಯೆಶಾಯ 12 : 3 (IRVKN)
ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
ಯೆಶಾಯ 12 : 4 (IRVKN)
ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
ಯೆಶಾಯ 12 : 5 (IRVKN)
ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
ಯೆಶಾಯ 12 : 6 (IRVKN)
ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
❮
❯
1
2
3
4
5
6