ಯೆಶಾಯ 13 : 1 (IRVKN)
ಬಾಬೆಲಿನ ವಿಷಯವಾದ ದೈವೋಕ್ತಿ
ಯೆಶಾಯ 13 : 2 (IRVKN)
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ. ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.
ಯೆಶಾಯ 13 : 3 (IRVKN)
ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.
ಯೆಶಾಯ 13 : 4 (IRVKN)
ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.
ಯೆಶಾಯ 13 : 5 (IRVKN)
ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.
ಯೆಶಾಯ 13 : 6 (IRVKN)
ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.
ಯೆಶಾಯ 13 : 7 (IRVKN)
ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.
ಯೆಶಾಯ 13 : 8 (IRVKN)
ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.
ಯೆಶಾಯ 13 : 9 (IRVKN)
ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.
ಯೆಶಾಯ 13 : 10 (IRVKN)
ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.
ಯೆಶಾಯ 13 : 11 (IRVKN)
ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
ಯೆಶಾಯ 13 : 12 (IRVKN)
ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು.
ಯೆಶಾಯ 13 : 13 (IRVKN)
ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
ಯೆಶಾಯ 13 : 14 (IRVKN)
ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ* ಇಲ್ಲದಂಥ ಅಥವಾ ಕುರುಬನಿಲ್ಲದಂಥ. ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
ಯೆಶಾಯ 13 : 15 (IRVKN)
ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.
ಯೆಶಾಯ 13 : 16 (IRVKN)
ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.
ಯೆಶಾಯ 13 : 17 (IRVKN)
ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.
ಯೆಶಾಯ 13 : 18 (IRVKN)
ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.
ಯೆಶಾಯ 13 : 19 (IRVKN)
ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.
ಯೆಶಾಯ 13 : 20 (IRVKN)
ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.
ಯೆಶಾಯ 13 : 21 (IRVKN)
ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.
ಯೆಶಾಯ 13 : 22 (IRVKN)
ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22