ಯೆಶಾಯ 14 : 1 (IRVKN)
ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಯೆಶಾಯ 14 : 2 (IRVKN)
ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.
ಯೆಶಾಯ 14 : 3 (IRVKN)
ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,
ಯೆಶಾಯ 14 : 4 (IRVKN)
ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!
ಯೆಶಾಯ 14 : 5 (IRVKN)
ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.
ಯೆಶಾಯ 14 : 6 (IRVKN)
ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.
ಯೆಶಾಯ 14 : 7 (IRVKN)
ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.
ಯೆಶಾಯ 14 : 8 (IRVKN)
ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
ಯೆಶಾಯ 14 : 9 (IRVKN)
ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.
ಯೆಶಾಯ 14 : 10 (IRVKN)
ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.
ಯೆಶಾಯ 14 : 11 (IRVKN)
ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.
ಯೆಶಾಯ 14 : 12 (IRVKN)
ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!
ಯೆಶಾಯ 14 : 13 (IRVKN)
ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.
ಯೆಶಾಯ 14 : 14 (IRVKN)
ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!
ಯೆಶಾಯ 14 : 15 (IRVKN)
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.
ಯೆಶಾಯ 14 : 16 (IRVKN)
ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,
ಯೆಶಾಯ 14 : 17 (IRVKN)
ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.
ಯೆಶಾಯ 14 : 18 (IRVKN)
ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.
ಯೆಶಾಯ 14 : 19 (IRVKN)
ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,
ಯೆಶಾಯ 14 : 20 (IRVKN)
ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”
ಯೆಶಾಯ 14 : 21 (IRVKN)
ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.
ಯೆಶಾಯ 14 : 22 (IRVKN)
“ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಯೆಶಾಯ 14 : 23 (IRVKN)
“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
ಯೆಶಾಯ 14 : 24 (IRVKN)
ಅಶ್ಶೂರದ ವಿಷಯವಾದ ದೈವೋಕ್ತಿ ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
ಯೆಶಾಯ 14 : 25 (IRVKN)
ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.
ಯೆಶಾಯ 14 : 26 (IRVKN)
ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ಯೆಶಾಯ 14 : 27 (IRVKN)
ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.
ಯೆಶಾಯ 14 : 28 (IRVKN)
ಫಿಲಿಷ್ಟಿಯರ ವಿಷಯವಾದ ದೈವೋಕ್ತಿ
ಯೆಶಾಯ 14 : 29 (IRVKN)
ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು: ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.
ಯೆಶಾಯ 14 : 30 (IRVKN)
ಬಡವರಲ್ಲಿ ಹಿರಿಯ ಮಕ್ಕಳು* ಬಡವರಲ್ಲಿ ಹಿರಿಯ ಮಕ್ಕಳು ಅಂದರೆ ಬಡವರಲ್ಲಿ ಕಡು ಬಡವರು. ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.
ಯೆಶಾಯ 14 : 31 (IRVKN)
ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
ಯೆಶಾಯ 14 : 32 (IRVKN)
ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32