ಯೆಶಾಯ 17 : 1 (IRVKN)
ದಮಸ್ಕದ ವಿಷಯವಾದ ದೈವೋಕ್ತಿ ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.
ಯೆಶಾಯ 17 : 2 (IRVKN)
ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.
ಯೆಶಾಯ 17 : 3 (IRVKN)
ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಯೆಶಾಯ 17 : 4 (IRVKN)
“ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.
ಯೆಶಾಯ 17 : 5 (IRVKN)
ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು. ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು.
ಯೆಶಾಯ 17 : 6 (IRVKN)
ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.
ಯೆಶಾಯ 17 : 7 (IRVKN)
7 ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.
ಯೆಶಾಯ 17 : 8 (IRVKN)
ಯೆಶಾಯ 17 : 9 (IRVKN)
ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ. ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ, ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು.
ಯೆಶಾಯ 17 : 10 (IRVKN)
ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.
ಯೆಶಾಯ 17 : 11 (IRVKN)
ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.
ಯೆಶಾಯ 17 : 12 (IRVKN)
ಅಶ್ಶೂರದ ವಿಷಯವಾದ ದೈವೋಕ್ತಿ ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!
ಯೆಶಾಯ 17 : 13 (IRVKN)
ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
ಯೆಶಾಯ 17 : 14 (IRVKN)
ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

1 2 3 4 5 6 7 8 9 10 11 12 13 14