ಯೆಶಾಯ 19 : 1 (IRVKN)
ಐಗುಪ್ತದ ವಿಷಯವಾದ ದೈವೋಕ್ತಿ ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.
ಯೆಶಾಯ 19 : 2 (IRVKN)
“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.
ಯೆಶಾಯ 19 : 3 (IRVKN)
ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
ಯೆಶಾಯ 19 : 4 (IRVKN)
ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.
ಯೆಶಾಯ 19 : 5 (IRVKN)
ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.
ಯೆಶಾಯ 19 : 6 (IRVKN)
ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.
ಯೆಶಾಯ 19 : 7 (IRVKN)
ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು, ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು.
ಯೆಶಾಯ 19 : 8 (IRVKN)
ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.
ಯೆಶಾಯ 19 : 9 (IRVKN)
ನಯವಾದ ಸೆಣಬಿನ ಕೆಲಸದವರೂ, ಬಿಳಿ ಬಟ್ಟೆಯನ್ನು ನೇಯುವವರೂ ಹತಾಶರಾಗುವರು.
ಯೆಶಾಯ 19 : 10 (IRVKN)
ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.
ಯೆಶಾಯ 19 : 11 (IRVKN)
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
ಯೆಶಾಯ 19 : 12 (IRVKN)
ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.
ಯೆಶಾಯ 19 : 13 (IRVKN)
ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ* ನೋಫಿನ ಅಥವಾ ಮೇಂಫಿಸ್. ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.
ಯೆಶಾಯ 19 : 14 (IRVKN)
ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.
ಯೆಶಾಯ 19 : 15 (IRVKN)
ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.
ಯೆಶಾಯ 19 : 16 (IRVKN)
ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.
ಯೆಶಾಯ 19 : 17 (IRVKN)
ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.
ಯೆಶಾಯ 19 : 18 (IRVKN)
ಯೆಶಾಯ 19 : 19 (IRVKN)
ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.” ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.
ಯೆಶಾಯ 19 : 20 (IRVKN)
ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
ಯೆಶಾಯ 19 : 21 (IRVKN)
ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.
ಯೆಶಾಯ 19 : 22 (IRVKN)
ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.
ಯೆಶಾಯ 19 : 23 (IRVKN)
ಯೆಶಾಯ 19 : 24 (IRVKN)
ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು. ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.
ಯೆಶಾಯ 19 : 25 (IRVKN)
“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25