ಯೆಶಾಯ 21 : 1 (IRVKN)
ಬಾಬೆಲಿನ ವಿಷಯವಾದ ದೈವೋಕ್ತಿ ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ
ಯೆಶಾಯ 21 : 2 (IRVKN)
ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಯೆಶಾಯ 21 : 3 (IRVKN)
ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.
ಯೆಶಾಯ 21 : 4 (IRVKN)
ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.
ಯೆಶಾಯ 21 : 5 (IRVKN)
ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!
ಯೆಶಾಯ 21 : 6 (IRVKN)
ಕರ್ತನು ನನಗೆ ಹೇಳುವುದೇನೆಂದರೆ, “ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.
ಯೆಶಾಯ 21 : 7 (IRVKN)
ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ, ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ, ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ” ಎಂಬುದೇ.
ಯೆಶಾಯ 21 : 8 (IRVKN)
ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
ಯೆಶಾಯ 21 : 9 (IRVKN)
ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.
ಯೆಶಾಯ 21 : 10 (IRVKN)
ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.
ಯೆಶಾಯ 21 : 11 (IRVKN)
ಎದೋಮಿನ ಬಗ್ಗೆ ದೈವೋಕ್ತಿ ದೂಮದ* ದೂಮದ ಇದು ಎದೋಮಿನ ಮತ್ತೊಂದು ಹೆಸರಾಗಿದೆ. ದೂಮ ಎಂದರೆ ಶಾಂತತೆ. ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ [† ಸೇಯೀರಿನಿಂದ ಇದು ಸಹ ಎದೋಮಿನ ಮತ್ತೊಂದು ಹೆಸರಾಗಿದೆ. ಆದಿ 32: 3 ] ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು
ಯೆಶಾಯ 21 : 12 (IRVKN)
ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.
ಯೆಶಾಯ 21 : 13 (IRVKN)
ಅರಬಿಯ ಬಗ್ಗೆ ದೈವೋಕ್ತಿ ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.
ಯೆಶಾಯ 21 : 14 (IRVKN)
ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.
ಯೆಶಾಯ 21 : 15 (IRVKN)
ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.
ಯೆಶಾಯ 21 : 16 (IRVKN)
ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ‡ ಕೇದಾರಿನ ಅರಬಿಯದಲ್ಲಿರುವ ಅಡವಿ ಪ್ರದೇಶ. ಸಕಲ ವೈಭವವು ಇಲ್ಲವಾಗುವುದು.
ಯೆಶಾಯ 21 : 17 (IRVKN)
ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.
❮
❯
1
2
3
4
5
6
7
8
9
10
11
12
13
14
15
16
17