ಯೆಶಾಯ 27 : 1 (IRVKN)
ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
ಯೆಶಾಯ 27 : 2 (IRVKN)
ಯೆಹೋವನ ದ್ರಾಕ್ಷಿ ತೋಟದ ಗೀತೆ ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,
ಯೆಶಾಯ 27 : 3 (IRVKN)
“ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.
ಯೆಶಾಯ 27 : 4 (IRVKN)
ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.
ಯೆಶಾಯ 27 : 5 (IRVKN)
ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.
ಯೆಶಾಯ 27 : 6 (IRVKN)
ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”
ಯೆಶಾಯ 27 : 7 (IRVKN)
ಯೆಹೋವನು ಇಸ್ರಾಯೇಲನ್ನು ಶಿಕ್ಷಿಸುವುದು ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?
ಯೆಶಾಯ 27 : 8 (IRVKN)
ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ* ಹೋರಾಡುತ್ತಿದ್ದೀ ಆಳತೆಗಳಗನುಸಾರವಾಗಿ. ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.
ಯೆಶಾಯ 27 : 9 (IRVKN)
ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
ಯೆಶಾಯ 27 : 10 (IRVKN)
ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.
ಯೆಶಾಯ 27 : 11 (IRVKN)
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
ಯೆಶಾಯ 27 : 12 (IRVKN)
ಇಸ್ರಾಯೇಲರ ಪುನರಾಗಮನ ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.
ಯೆಶಾಯ 27 : 13 (IRVKN)
ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.

1 2 3 4 5 6 7 8 9 10 11 12 13