ಯೆಶಾಯ 28 : 1 (IRVKN)
{ಇಸ್ರಾಯೇಲರಿಗೆ ಎಚ್ಚರಿಕೆ} [PS] ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ [* ಕಿರೀಟದ ಅಥವಾ ಜಯಮಾಲೆ.] ಗತಿಯೇ! [QBR] ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ! [QBR]
ಯೆಶಾಯ 28 : 2 (IRVKN)
ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, [QBR] ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು. [QBR]
ಯೆಶಾಯ 28 : 3 (IRVKN)
ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು. [QBR]
ಯೆಶಾಯ 28 : 4 (IRVKN)
ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, [QBR] ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, [QBR] ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು. [QBR]
ಯೆಶಾಯ 28 : 5 (IRVKN)
ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು. [QBR]
ಯೆಶಾಯ 28 : 6 (IRVKN)
ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
ಯೆಶಾಯ 28 : 7 (IRVKN)
{ಯೆಶಾಯನು ಯೆರೂಸಲೇಮಿನ ಅಧಿಪತಿಗಳನ್ನು ಖಂಡಿಸಿದ್ದು} [PS] ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; [QBR] ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, [QBR] ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ. [QBR]
ಯೆಶಾಯ 28 : 8 (IRVKN)
ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ. [QBR]
ಯೆಶಾಯ 28 : 9 (IRVKN)
ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? [QBR] ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ? [QBR]
ಯೆಶಾಯ 28 : 10 (IRVKN)
ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ. [PE][PS]
ಯೆಶಾಯ 28 : 11 (IRVKN)
ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು. [QBR]
ಯೆಶಾಯ 28 : 12 (IRVKN)
ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, [QBR] ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು. [QBR]
ಯೆಶಾಯ 28 : 13 (IRVKN)
ಹೀಗಿರಲು ಯೆಹೋವನ ಮಾತು [QBR] ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, [QBR] ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; [QBR] ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
ಯೆಶಾಯ 28 : 14 (IRVKN)
{ಯೆಹೂದಕ್ಕೆ ಎಚ್ಚರಿಕೆ} [PS] ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, [QBR] ಯೆಹೋವನ ಮಾತನ್ನು ಕೇಳಿರಿ, [QBR]
ಯೆಶಾಯ 28 : 15 (IRVKN)
ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; [QBR] ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; [QBR] ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ. [QBR]
ಯೆಶಾಯ 28 : 16 (IRVKN)
[† ಕೀರ್ತನೆ 118:22-23; ರೋಮಾ. 9:33; 1 ಪೇತ್ರ 2:6 ನೋಡಿರಿ.] ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, [QBR] “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, [QBR] ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು. [QBR]
ಯೆಶಾಯ 28 : 17 (IRVKN)
ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, [QBR] ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು. [QBR]
ಯೆಶಾಯ 28 : 18 (IRVKN)
ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; [QBR] ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. [QBR]
ಯೆಶಾಯ 28 : 19 (IRVKN)
ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; [QBR] ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; [QBR] ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು. [QBR]
ಯೆಶಾಯ 28 : 20 (IRVKN)
ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.” [QBR]
ಯೆಶಾಯ 28 : 21 (IRVKN)
ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ [QBR] ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು. [QBR]
ಯೆಶಾಯ 28 : 22 (IRVKN)
ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; [QBR] ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
ಯೆಶಾಯ 28 : 23 (IRVKN)
{ಯೆಹೋವನ ಕಾರ್ಯಗಳ ವಿವೇಕವು} [PS] ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ. [QBR]
ಯೆಶಾಯ 28 : 24 (IRVKN)
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ? [QBR]
ಯೆಶಾಯ 28 : 25 (IRVKN)
ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, [QBR] ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ? [QBR]
ಯೆಶಾಯ 28 : 26 (IRVKN)
ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ. [QBR]
ಯೆಶಾಯ 28 : 27 (IRVKN)
ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; [QBR] ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ. [QBR]
ಯೆಶಾಯ 28 : 28 (IRVKN)
ಗೋದಿಯ ಕಾಳನ್ನು ನುಚ್ಚು ಮಾಡುವನೋ? [QBR] ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ. [QBR]
ಯೆಶಾಯ 28 : 29 (IRVKN)
ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, [QBR] ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ. [PE]
❮
❯