ಯೆಶಾಯ 3 : 1 (IRVKN)
ಯೆಹೂದದ ಕುರಿತಾದ ನ್ಯಾಯತೀರ್ಪು ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.
ಯೆಶಾಯ 3 : 2 (IRVKN)
ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
ಯೆಶಾಯ 3 : 3 (IRVKN)
ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.
ಯೆಶಾಯ 3 : 4 (IRVKN)
ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.
ಯೆಶಾಯ 3 : 5 (IRVKN)
ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
ಯೆಶಾಯ 3 : 6 (IRVKN)
ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು.
ಯೆಶಾಯ 3 : 7 (IRVKN)
ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’ ” ಎಂದು ಹೇಳುವನು.
ಯೆಶಾಯ 3 : 8 (IRVKN)
ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
ಯೆಶಾಯ 3 : 9 (IRVKN)
ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
ಯೆಶಾಯ 3 : 10 (IRVKN)
ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
ಯೆಶಾಯ 3 : 11 (IRVKN)
ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.
ಯೆಶಾಯ 3 : 12 (IRVKN)
ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.
ಯೆಶಾಯ 3 : 13 (IRVKN)
ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.
ಯೆಶಾಯ 3 : 14 (IRVKN)
ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಯೆಶಾಯ 3 : 15 (IRVKN)
ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
ಯೆಶಾಯ 3 : 16 (IRVKN)
ಯೆರೂಸಲೇಮಿನವರಿಗಾಗುವ ದಂಡನೆಯೂ ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,
ಯೆಶಾಯ 3 : 17 (IRVKN)
ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.
ಯೆಶಾಯ 3 : 18 (IRVKN)
ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
ಯೆಶಾಯ 3 : 19 (IRVKN)
ಜುಮುಕಿ, ಬಳೆ, ಶಿರವಸ್ತ್ರ,
ಯೆಶಾಯ 3 : 20 (IRVKN)
ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ,
ಯೆಶಾಯ 3 : 21 (IRVKN)
ಮುದ್ರೆ ಉಂಗುರ, ಮೂಗುತಿ,
ಯೆಶಾಯ 3 : 22 (IRVKN)
ಹಬ್ಬದ ಉಡುಗೆ-ತೊಡುಗೆ, ಮೇಲಂಗಿ, ಶಾಲು, ಕೈಚೀಲ,
ಯೆಶಾಯ 3 : 23 (IRVKN)
ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.
ಯೆಶಾಯ 3 : 24 (IRVKN)
ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.
ಯೆಶಾಯ 3 : 25 (IRVKN)
ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.
ಯೆಶಾಯ 3 : 26 (IRVKN)
ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26