ಯೆಶಾಯ 30 : 1 (IRVKN)
{ಐಗುಪ್ತರೊಡನೆ ಸಂಧಾನ ವ್ಯರ್ಥ} [PS] ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” [QBR] “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ [QBR] ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. [QBR]
ಯೆಶಾಯ 30 : 2 (IRVKN)
ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, [QBR] ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ. [QBR]
ಯೆಶಾಯ 30 : 3 (IRVKN)
ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, [QBR] ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು. [QBR]
ಯೆಶಾಯ 30 : 4 (IRVKN)
ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ. [QBR]
ಯೆಶಾಯ 30 : 5 (IRVKN)
ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, [QBR] ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.” [PE][PS]
ಯೆಶಾಯ 30 : 6 (IRVKN)
ದಕ್ಷಿಣ ಸೀಮೆಯ [* ದಕ್ಷಿಣ ಸೀಮೆಯ ನೆಗೆವ್.] ನೀರಾನೆಯ ವಿಷಯವಾದ ದೈವೋಕ್ತಿ. [QBR] ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, [QBR] ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ [QBR] ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ. [QBR]
ಯೆಶಾಯ 30 : 7 (IRVKN)
ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; [QBR] ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
ಯೆಶಾಯ 30 : 8 (IRVKN)
{ಐಗುಪ್ತದ ಆಶ್ರಯದಿಂದಾಗುವ ದುರ್ಗತಿ} [PS] ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, [QBR] ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು. [QBR]
ಯೆಶಾಯ 30 : 9 (IRVKN)
ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, [QBR] ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು. [QBR]
ಯೆಶಾಯ 30 : 10 (IRVKN)
ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, [QBR] ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, [QBR] ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ. [QBR]
ಯೆಶಾಯ 30 : 11 (IRVKN)
ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; [QBR] ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ. [QBR]
ಯೆಶಾಯ 30 : 12 (IRVKN)
ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, [QBR] “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, [QBR] ಬಲಾತ್ಕಾರ ಕುಯುಕ್ತಿಗಳನ್ನು ನಂಬಿ, [QBR]
ಯೆಶಾಯ 30 : 13 (IRVKN)
ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, [QBR] ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, [QBR] ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.” [QBR]
ಯೆಶಾಯ 30 : 14 (IRVKN)
ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, [QBR] ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, [QBR] ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು. [QBR]
ಯೆಶಾಯ 30 : 15 (IRVKN)
ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, [QBR] “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, [QBR] ನೀವು ಒಪ್ಪಿಕೊಂಡಿಲ್ಲ. [QBR]
ಯೆಶಾಯ 30 : 16 (IRVKN)
ನೀವು, ‘ಬೇಡವೇ ಬೇಡ, [QBR] ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, [QBR] ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು. [QBR]
ಯೆಶಾಯ 30 : 17 (IRVKN)
ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; [QBR] ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; [QBR] ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”
ಯೆಶಾಯ 30 : 18 (IRVKN)
{ಯೆಹೂದ್ಯರ ಮುಂದಿನ ವಿಧೇಯತೆ ಮತ್ತು ಸುಸ್ಥಿತಿಯೂ} [PS] ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; [QBR] ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. [QBR]
ಯೆಶಾಯ 30 : 19 (IRVKN)
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, [QBR] ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು. [QBR]
ಯೆಶಾಯ 30 : 20 (IRVKN)
ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, [QBR] ನಿಮ್ಮ ಬೋಧಕನು ಇನ್ನು ಮರೆಯಾಗಿರನು, [QBR] ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ. [QBR]
ಯೆಶಾಯ 30 : 21 (IRVKN)
ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, [QBR] “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು. [QBR]
ಯೆಶಾಯ 30 : 22 (IRVKN)
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, [QBR] ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ. [QBR]
ಯೆಶಾಯ 30 : 23 (IRVKN)
ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; [QBR] ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; [QBR] ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು. [QBR]
ಯೆಶಾಯ 30 : 24 (IRVKN)
ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, [QBR] ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು. [QBR]
ಯೆಶಾಯ 30 : 25 (IRVKN)
ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, [QBR] ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು. [QBR]
ಯೆಶಾಯ 30 : 26 (IRVKN)
ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, [QBR] ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
ಯೆಶಾಯ 30 : 27 (IRVKN)
{ಯೆಹೋವನಿಂದ ಅಶ್ಶೂರ್ಯರಿಗಾದ ವಿನಾಶ} [PS] ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; [QBR] ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ. [QBR]
ಯೆಶಾಯ 30 : 28 (IRVKN)
ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. [QBR] ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು. [QBR]
ಯೆಶಾಯ 30 : 29 (IRVKN)
ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. [QBR] ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ. [QBR]
ಯೆಶಾಯ 30 : 30 (IRVKN)
ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, [QBR] ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು. [QBR]
ಯೆಶಾಯ 30 : 31 (IRVKN)
ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು. [QBR]
ಯೆಶಾಯ 30 : 32 (IRVKN)
ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, [QBR] ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು. [QBR]
ಯೆಶಾಯ 30 : 33 (IRVKN)
ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. [QBR] ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; [QBR] ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: