ಯೆಶಾಯ 33 : 1 (IRVKN)
ಅಪಾಯವೂ ಮುಂದಿನ ಸಂರಕ್ಷಣೆಯೂ ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
ಯೆಶಾಯ 33 : 2 (IRVKN)
ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.
ಯೆಶಾಯ 33 : 3 (IRVKN)
ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.
ಯೆಶಾಯ 33 : 4 (IRVKN)
ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.
ಯೆಶಾಯ 33 : 5 (IRVKN)
ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.
ಯೆಶಾಯ 33 : 6 (IRVKN)
ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ* ನಿನಗೆ ಅಥವಾ ಚೀಯೋನಿಗೆ ನಿಧಿಯಾಗುವುದು.
ಯೆಶಾಯ 33 : 8 (IRVKN)
ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ. ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು† ಪಟ್ಟಣಗಳನ್ನು ಅಥವಾ ಸಾಕ್ಷಿಗಳನ್ನು. ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.
ಯೆಶಾಯ 33 : 9 (IRVKN)
ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.
ಯೆಶಾಯ 33 : 10 (IRVKN)
ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
ಯೆಶಾಯ 33 : 11 (IRVKN)
ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.
ಯೆಶಾಯ 33 : 12 (IRVKN)
ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.
ಯೆಶಾಯ 33 : 13 (IRVKN)
ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.
ಯೆಶಾಯ 33 : 14 (IRVKN)
ಯೆಹೋವನ ರಕ್ಷಣೆಯನ್ನು ಹೊಂದತಕ್ಕವರು “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
ಯೆಶಾಯ 33 : 15 (IRVKN)
ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
ಯೆಶಾಯ 33 : 16 (IRVKN)
ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
ಯೆಶಾಯ 33 : 17 (IRVKN)
ಯೆರೂಸಲೇಮಿನ ಮುಂದಿನ ಸುಸ್ಥಿತಿ
ಯೆಶಾಯ 33 : 18 (IRVKN)
ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ. ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.
ಯೆಶಾಯ 33 : 19 (IRVKN)
ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.
ಯೆಶಾಯ 33 : 20 (IRVKN)
ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.
ಯೆಶಾಯ 33 : 21 (IRVKN)
ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.
ಯೆಶಾಯ 33 : 22 (IRVKN)
ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
ಯೆಶಾಯ 33 : 23 (IRVKN)
ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.
ಯೆಶಾಯ 33 : 24 (IRVKN)
ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24