ಯೆಶಾಯ 36 : 1 (IRVKN)
{#1ಸನ್ಹೇರೀಬನು ಯೆರೂಸಲೇಮನ್ನು ಮುತ್ತಿದ್ದು } [PS]ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
ಯೆಶಾಯ 36 : 2 (IRVKN)
ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ[* ರಬ್ಷಾಕೆ ಅವನ ಸೈನ್ಯಾಧಿಕಾರಿ. ] ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.
ಯೆಶಾಯ 36 : 3 (IRVKN)
ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು. [PE]
ಯೆಶಾಯ 36 : 4 (IRVKN)
[PS]ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?
ಯೆಶಾಯ 36 : 5 (IRVKN)
ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’ [PE]
ಯೆಶಾಯ 36 : 6 (IRVKN)
[PS]“ ‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.
ಯೆಶಾಯ 36 : 7 (IRVKN)
ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ! [PE]
ಯೆಶಾಯ 36 : 9 (IRVKN)
[PS]“ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ? [PE][PS]“ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.
ಯೆಶಾಯ 36 : 10 (IRVKN)
ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳು ಮಾಡಿಬಿಡು’ ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ” ಎಂದು ಹೇಳಿದನು. [PE]
ಯೆಶಾಯ 36 : 11 (IRVKN)
[PS]ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ[† ಯೂದಾಯ ಭಾಷೆಯಲ್ಲಿ ಇಬ್ರಿಯ ಭಾಷೆಯಲ್ಲಿ. ] ಮಾತನಾಡಬೇಡ” ಎಂದು ಹೇಳಿದರು.
ಯೆಶಾಯ 36 : 12 (IRVKN)
ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು. [PE]
ಯೆಶಾಯ 36 : 13 (IRVKN)
[PS]ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ,[‡ ಯೂದಾಯ ಭಾಷೆಯಲ್ಲಿ, ಇಬ್ರಿಯ ಭಾಷೆಯಲ್ಲಿ. ] “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
ಯೆಶಾಯ 36 : 14 (IRVKN)
ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.’
ಯೆಶಾಯ 36 : 15 (IRVKN)
ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ” ಎಂಬುದಾಗಿ ಹೇಳಿದರೆ,
ಯೆಶಾಯ 36 : 16 (IRVKN)
ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.
ಯೆಶಾಯ 36 : 17 (IRVKN)
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.” [PE]
ಯೆಶಾಯ 36 : 18 (IRVKN)
[PS]“ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?
ಯೆಶಾಯ 36 : 19 (IRVKN)
ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?
ಯೆಶಾಯ 36 : 20 (IRVKN)
ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು. [PE]
ಯೆಶಾಯ 36 : 21 (IRVKN)
[PS]ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.
ಯೆಶಾಯ 36 : 22 (IRVKN)
ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು. [PE]
❮
❯