ಯೆಶಾಯ 37 : 1 (IRVKN)
ಹಿಜ್ಕೀಯನು ದೇವರಾಲೋಚನೆ ವಿಚಾರಿಸಿದ್ದು ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
ಯೆಶಾಯ 37 : 2 (IRVKN)
ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.
ಯೆಶಾಯ 37 : 3 (IRVKN)
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
ಯೆಶಾಯ 37 : 4 (IRVKN)
ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’ ” ಎಂದು ಹೇಳಿದರು.
ಯೆಶಾಯ 37 : 5 (IRVKN)
ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ,
ಯೆಶಾಯ 37 : 6 (IRVKN)
“ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.
ಯೆಶಾಯ 37 : 7 (IRVKN)
ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.
ಯೆಶಾಯ 37 : 8 (IRVKN)
ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
ಯೆಶಾಯ 37 : 9 (IRVKN)
ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,
ಯೆಶಾಯ 37 : 10 (IRVKN)
“ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’
ಯೆಶಾಯ 37 : 11 (IRVKN)
ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?
ಯೆಶಾಯ 37 : 12 (IRVKN)
ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
ಯೆಶಾಯ 37 : 13 (IRVKN)
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
ಯೆಶಾಯ 37 : 14 (IRVKN)
ಹಿಜ್ಕೀಯನ ಪ್ರಾರ್ಥನೆ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
ಯೆಶಾಯ 37 : 15 (IRVKN)
ಹಿಜ್ಕೀಯನು ಯೆಹೋವನನ್ನು ಕುರಿತು
ಯೆಶಾಯ 37 : 16 (IRVKN)
“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.
ಯೆಶಾಯ 37 : 17 (IRVKN)
ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.
ಯೆಶಾಯ 37 : 18 (IRVKN)
ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.
ಯೆಶಾಯ 37 : 19 (IRVKN)
ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
ಯೆಶಾಯ 37 : 20 (IRVKN)
ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”
ಯೆಶಾಯ 37 : 21 (IRVKN)
ಯೆಶಾಯನ ಮೂಲಕ ಬಂದ ದೈವೋಕ್ತಿ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’
ಯೆಶಾಯ 37 : 22 (IRVKN)
ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.
ಯೆಶಾಯ 37 : 23 (IRVKN)
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
ಯೆಶಾಯ 37 : 24 (IRVKN)
ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
ಯೆಶಾಯ 37 : 25 (IRVKN)
ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.
ಯೆಶಾಯ 37 : 26 (IRVKN)
ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.
ಯೆಶಾಯ 37 : 27 (IRVKN)
ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.
ಯೆಶಾಯ 37 : 28 (IRVKN)
ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು.
ಯೆಶಾಯ 37 : 29 (IRVKN)
ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
ಯೆಶಾಯ 37 : 30 (IRVKN)
ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
ಯೆಶಾಯ 37 : 31 (IRVKN)
ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
ಯೆಶಾಯ 37 : 32 (IRVKN)
ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಯೆಶಾಯ 37 : 33 (IRVKN)
ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.
ಯೆಶಾಯ 37 : 34 (IRVKN)
ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ.
ಯೆಶಾಯ 37 : 35 (IRVKN)
ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.
ಯೆಶಾಯ 37 : 36 (IRVKN)
ಸನ್ಹೇರೀಬನ ಅಪಜಯವೂ ಮರಣವೂ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಯೆಶಾಯ 37 : 37 (IRVKN)
ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
ಯೆಶಾಯ 37 : 38 (IRVKN)
ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38