ಯೆಶಾಯ 40 : 1 (IRVKN)
ದೇವಜನರಿಗೆ ಸಂತೈಯಿಸುವಿಕೆ “ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
ಯೆಶಾಯ 40 : 2 (IRVKN)
ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.
ಯೆಶಾಯ 40 : 3 (IRVKN)
ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
ಯೆಶಾಯ 40 : 4 (IRVKN)
ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.
ಯೆಶಾಯ 40 : 5 (IRVKN)
ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.
ಯೆಶಾಯ 40 : 6 (IRVKN)
ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
ಯೆಶಾಯ 40 : 7 (IRVKN)
ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
ಯೆಶಾಯ 40 : 8 (IRVKN)
ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.
ಯೆಶಾಯ 40 : 9 (IRVKN)
ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ,* ಚೀಯೋನೇ, ಚೀಯೋನಿಂದ. ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ಯೆರೂಸಲೇಮೇ, ಯೆರೂಸಲೇಮಿನಿಂದ. ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!
ಯೆಶಾಯ 40 : 10 (IRVKN)
ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
ಯೆಶಾಯ 40 : 11 (IRVKN)
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
ಯೆಶಾಯ 40 : 12 (IRVKN)
ಯೆಹೋವನ ಅಸಮಾನವಾದ ಮಹಿಮೆ ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?
ಯೆಶಾಯ 40 : 13 (IRVKN)
ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?
ಯೆಶಾಯ 40 : 14 (IRVKN)
ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?
ಯೆಶಾಯ 40 : 15 (IRVKN)
ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.
ಯೆಶಾಯ 40 : 16 (IRVKN)
(ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.
ಯೆಶಾಯ 40 : 17 (IRVKN)
ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.
ಯೆಶಾಯ 40 : 18 (IRVKN)
ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?
ಯೆಶಾಯ 40 : 19 (IRVKN)
ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.
ಯೆಶಾಯ 40 : 20 (IRVKN)
(ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.
ಯೆಶಾಯ 40 : 21 (IRVKN)
ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?
ಯೆಶಾಯ 40 : 22 (IRVKN)
ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
ಯೆಶಾಯ 40 : 23 (IRVKN)
ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
ಯೆಶಾಯ 40 : 24 (IRVKN)
ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.
ಯೆಶಾಯ 40 : 25 (IRVKN)
ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.
ಯೆಶಾಯ 40 : 26 (IRVKN)
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
ಯೆಶಾಯ 40 : 27 (IRVKN)
ಯೆಹೋವನು ಬಳಲಿದವರನ್ನು ಬಲಪಡಿಸುವುದು ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?
ಯೆಶಾಯ 40 : 28 (IRVKN)
ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
ಯೆಶಾಯ 40 : 29 (IRVKN)
ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ಯೆಶಾಯ 40 : 30 (IRVKN)
ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
ಯೆಶಾಯ 40 : 31 (IRVKN)
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31