ಯೆಶಾಯ 46 : 1 (IRVKN)
ಬಾಬೆಲಿನ ಅಶಕ್ತ ದೇವತೆಗಳು ಮತ್ತು ಸರ್ವಶಕ್ತ ಯೆಹೋವ ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ,* ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಮರ್ದುಕ್ ಎಂದೂ ಕರೆಯಲ್ಪಡುವ ಬೇಲ್, ಬಾಬೆಲಿನ ಮುಖ್ಯ ದೇವರುಗಳಲ್ಲಿ ಒಬ್ಬನಾಗಿದ್ದಾನೆ. ನೆಬೋ ಸಹ ಮತ್ತೊಬ್ಬನಾಗಿದ್ದಾನೆ; ಇವನು ಮರ್ದುಕ್ ನ ಮಗನು. ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.
ಯೆಶಾಯ 46 : 2 (IRVKN)
ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.
ಯೆಶಾಯ 46 : 3 (IRVKN)
ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.
ಯೆಶಾಯ 46 : 4 (IRVKN)
ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.
ಯೆಶಾಯ 46 : 5 (IRVKN)
ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?
ಯೆಶಾಯ 46 : 6 (IRVKN)
ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
ಯೆಶಾಯ 46 : 7 (IRVKN)
ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.
ಯೆಶಾಯ 46 : 8 (IRVKN)
“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!
ಯೆಶಾಯ 46 : 9 (IRVKN)
ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.
ಯೆಶಾಯ 46 : 10 (IRVKN)
ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
ಯೆಶಾಯ 46 : 11 (IRVKN)
ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.
ಯೆಶಾಯ 46 : 12 (IRVKN)
ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.
ಯೆಶಾಯ 46 : 13 (IRVKN)
ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”

1 2 3 4 5 6 7 8 9 10 11 12 13