ಯೆಶಾಯ 47 : 1 (IRVKN)
ಬಾಬೆಲಿನ ಗೀತೆ ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.
ಯೆಶಾಯ 47 : 2 (IRVKN)
ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.
ಯೆಶಾಯ 47 : 3 (IRVKN)
ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.
ಯೆಶಾಯ 47 : 4 (IRVKN)
ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!
ಯೆಶಾಯ 47 : 5 (IRVKN)
ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.
ಯೆಶಾಯ 47 : 6 (IRVKN)
ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
ಯೆಶಾಯ 47 : 7 (IRVKN)
“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.
ಯೆಶಾಯ 47 : 8 (IRVKN)
“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
ಯೆಶಾಯ 47 : 9 (IRVKN)
ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.
ಯೆಶಾಯ 47 : 10 (IRVKN)
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.
ಯೆಶಾಯ 47 : 11 (IRVKN)
ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.
ಯೆಶಾಯ 47 : 12 (IRVKN)
ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.
ಯೆಶಾಯ 47 : 13 (IRVKN)
ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
ಯೆಶಾಯ 47 : 14 (IRVKN)
ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.
ಯೆಶಾಯ 47 : 15 (IRVKN)
ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.

1 2 3 4 5 6 7 8 9 10 11 12 13 14 15