ಯೆಶಾಯ 48 : 1 (IRVKN)
ಮೊಂಡರಾದ ಇಸ್ರಾಯೇಲರು ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
ಯೆಶಾಯ 48 : 2 (IRVKN)
ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
ಯೆಶಾಯ 48 : 3 (IRVKN)
ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
ಯೆಶಾಯ 48 : 4 (IRVKN)
ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
ಯೆಶಾಯ 48 : 5 (IRVKN)
ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
ಯೆಶಾಯ 48 : 6 (IRVKN)
ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
ಯೆಶಾಯ 48 : 7 (IRVKN)
ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.
ಯೆಶಾಯ 48 : 8 (IRVKN)
ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
ಯೆಶಾಯ 48 : 9 (IRVKN)
ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.
ಯೆಶಾಯ 48 : 10 (IRVKN)
ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
ಯೆಶಾಯ 48 : 11 (IRVKN)
ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.
ಯೆಶಾಯ 48 : 12 (IRVKN)
ಬಾಬೆಲಿನಿಂದ ಬಿಡುಗಡೆ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ
ಯೆಶಾಯ 48 : 13 (IRVKN)
ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.
ಯೆಶಾಯ 48 : 14 (IRVKN)
ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.
ಯೆಶಾಯ 48 : 15 (IRVKN)
ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
ಯೆಶಾಯ 48 : 16 (IRVKN)
ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
ಯೆಶಾಯ 48 : 17 (IRVKN)
ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
ಯೆಶಾಯ 48 : 18 (IRVKN)
ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.
ಯೆಶಾಯ 48 : 19 (IRVKN)
ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.
ಯೆಶಾಯ 48 : 20 (IRVKN)
ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’ ” ಎಂದು ಹೇಳಿರಿ.
ಯೆಶಾಯ 48 : 21 (IRVKN)
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
ಯೆಶಾಯ 48 : 22 (IRVKN)
“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22