ಯೆಶಾಯ 5 : 1 (IRVKN)
ಯೆಹೋವನ ದ್ರಾಕ್ಷಿಯ ತೋಟದ ಗೀತೆ ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
ಯೆಶಾಯ 5 : 2 (IRVKN)
ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
ಯೆಶಾಯ 5 : 3 (IRVKN)
ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.
ಯೆಶಾಯ 5 : 4 (IRVKN)
ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?
ಯೆಶಾಯ 5 : 5 (IRVKN)
ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
ಯೆಶಾಯ 5 : 6 (IRVKN)
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
ಯೆಶಾಯ 5 : 7 (IRVKN)
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
ಯೆಶಾಯ 5 : 8 (IRVKN)
ಬರಲಿರುವ ಅಪತ್ತು ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!
ಯೆಶಾಯ 5 : 9 (IRVKN)
ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.
ಯೆಶಾಯ 5 : 10 (IRVKN)
ಏಕೆಂದರೆ ಹತ್ತು ಎಕರೆ* ಎಕರೆ ಎಕರೆ ಎಂದು ಭಾಷಾಂತರಿಸಲ್ಪಟ್ಟಿರುವ ಹೀಬ್ರೂ ಪದದ ಅಕ್ಷರಶಃವಾದ ಅರ್ಥವು ಒಂದು ದಿನದಲ್ಲಿ ಒಂದು ಜೋಡಿ ಎತ್ತುಗಳು ಉಳುವಷ್ಟು ಪ್ರದೇಶವಾಗಿದೆ. ಇದು ಆಧುನಿಕ ಕಾಲದ ಎಕರೆಯ ಅಳತೆ ಅಲ್ಲ. ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ † ಕೊಳಗದಷ್ಟೇ ಬತ್ ಅಂದರೆ 22 ಲೀಟರ್. ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ‡ ಖಂಡುಗ ಹೋಮೆರ್ 220 ಲೀಟರ್ ಏಫಾ 22 ಲೀಟರ್ ಬೀಜದಿಂದ ಕಡಿಮೆ ದವಸವು ಬರುವುದು.
ಯೆಶಾಯ 5 : 11 (IRVKN)
ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
ಯೆಶಾಯ 5 : 12 (IRVKN)
ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
ಯೆಶಾಯ 5 : 13 (IRVKN)
ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
ಯೆಶಾಯ 5 : 14 (IRVKN)
ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.
ಯೆಶಾಯ 5 : 15 (IRVKN)
ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
ಯೆಶಾಯ 5 : 16 (IRVKN)
ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
ಯೆಶಾಯ 5 : 17 (IRVKN)
ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.§ ಕುರಿಮರಿಗಳು ಅಲ್ಲಿ ಮೇಯುವವು. ಅಂದರೆ ಇತರ ಜನರು ತಿನ್ನುವರು.
ಯೆಶಾಯ 5 : 18 (IRVKN)
ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,
ಯೆಶಾಯ 5 : 19 (IRVKN)
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
ಯೆಶಾಯ 5 : 20 (IRVKN)
ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
ಯೆಶಾಯ 5 : 21 (IRVKN)
ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.
ಯೆಶಾಯ 5 : 22 (IRVKN)
ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
ಯೆಶಾಯ 5 : 23 (IRVKN)
ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!
ಯೆಶಾಯ 5 : 24 (IRVKN)
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
ಯೆಶಾಯ 5 : 25 (IRVKN)
ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
ಯೆಶಾಯ 5 : 26 (IRVKN)
ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
ಯೆಶಾಯ 5 : 27 (IRVKN)
ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.
ಯೆಶಾಯ 5 : 28 (IRVKN)
ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.
ಯೆಶಾಯ 5 : 29 (IRVKN)
ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.
ಯೆಶಾಯ 5 : 30 (IRVKN)
ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30