ಯೆಶಾಯ 55 : 1 (IRVKN)
{ಯೆಹೋವನ ಕರೆ} [PS] “ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! [QBR] ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ. [QBR]
ಯೆಶಾಯ 55 : 2 (IRVKN)
ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? [QBR] ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ. [QBR]
ಯೆಶಾಯ 55 : 3 (IRVKN)
ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; [QBR] ಆಲಿಸಿದರೆ ಬದುಕಿ ಬಾಳುವಿರಿ. [QBR] ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು. [QBR]
ಯೆಶಾಯ 55 : 4 (IRVKN)
ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, [QBR] ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು. [QBR]
ಯೆಶಾಯ 55 : 5 (IRVKN)
ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, [QBR] ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ [QBR] ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು. [QBR]
ಯೆಶಾಯ 55 : 6 (IRVKN)
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, [QBR] ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ. [QBR]
ಯೆಶಾಯ 55 : 7 (IRVKN)
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; [QBR] ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; [QBR] ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು. [QBR]
ಯೆಶಾಯ 55 : 8 (IRVKN)
ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ. [QBR]
ಯೆಶಾಯ 55 : 9 (IRVKN)
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, [QBR] ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ. [QBR]
ಯೆಶಾಯ 55 : 10 (IRVKN)
ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, [QBR] ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, [QBR]
ಯೆಶಾಯ 55 : 11 (IRVKN)
ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, [QBR] ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ. [QBR]
ಯೆಶಾಯ 55 : 12 (IRVKN)
ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; [QBR] ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು. [QBR]
ಯೆಶಾಯ 55 : 13 (IRVKN)
ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; [QBR] ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.” [PE]

1 2 3 4 5 6 7 8 9 10 11 12 13

BG:

Opacity:

Color:


Size:


Font: