ಯೆಶಾಯ 57 : 1 (IRVKN)
ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, [QBR] ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು. [QBR]
ಯೆಶಾಯ 57 : 2 (IRVKN)
ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; [QBR] ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.
ಯೆಶಾಯ 57 : 3 (IRVKN)
{ಇಸ್ರಾಯೇಲಿನ ವಿಗ್ರಹಾರಾಧನೆಯನ್ನು ಖಂಡಿಸಿದ್ದು} [PS] ಮಾಟಗಾತಿಯ ಮಕ್ಕಳೇ, [QBR] ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ! [QBR]
ಯೆಶಾಯ 57 : 4 (IRVKN)
ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? [QBR] ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ? [QBR]
ಯೆಶಾಯ 57 : 5 (IRVKN)
ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, [QBR] ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು [QBR] ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ. [QBR]
ಯೆಶಾಯ 57 : 6 (IRVKN)
ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; [QBR] ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. [QBR] ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ? [QBR]
ಯೆಶಾಯ 57 : 7 (IRVKN)
ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ. [QBR]
ಯೆಶಾಯ 57 : 8 (IRVKN)
ಬಾಗಿಲಿನ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದಿ; [QBR] ನನ್ನನ್ನು ಬಿಟ್ಟುಬಿಟ್ಟು, ನಿನ್ನ ಮಂಚದ ಗವಸಣಿಗೆಯನ್ನು ತೆಗೆದು, [QBR] ಅದನ್ನು ಹತ್ತಿ ಅದರಲ್ಲಿ ಅನ್ಯರಿಗೆ ಸ್ಥಳಕೊಟ್ಟು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಿ. [QBR] ಅವರ ಸಂಗಮವನ್ನು ಆಶಿಸಿ, ನಿನ್ನನ್ನು ತೋರ್ಪಡಿಸಿಕೊಂಡಿದ್ದಿ. [QBR]
ಯೆಶಾಯ 57 : 9 (IRVKN)
ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ [* ಪರರಾಜನ ಅಥವಾ ಮೊಲೆಕೆಂಬ ವಿಗ್ರಹ.] ಬಳಿಗೆ ಪ್ರಯಾಣಮಾಡಿದ್ದಿ; [QBR] ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ. [QBR]
ಯೆಶಾಯ 57 : 10 (IRVKN)
ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; [QBR] ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ. [QBR]
ಯೆಶಾಯ 57 : 11 (IRVKN)
ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? [QBR] ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?. [QBR]
ಯೆಶಾಯ 57 : 12 (IRVKN)
ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ. [QBR]
ಯೆಶಾಯ 57 : 13 (IRVKN)
ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. [QBR] ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. [QBR] ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
ಯೆಶಾಯ 57 : 14 (IRVKN)
{ಪಶ್ಚಾತ್ತಾಪ ಪಡುವವರಿಗೆ ಕ್ಷಮಾಪಣೆ} [PS] “ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; [QBR] ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ. [QBR]
ಯೆಶಾಯ 57 : 15 (IRVKN)
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, [QBR] “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, [QBR] ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ. [QBR]
ಯೆಶಾಯ 57 : 16 (IRVKN)
ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, [QBR] ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು. [QBR]
ಯೆಶಾಯ 57 : 17 (IRVKN)
ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, [QBR] ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; [QBR] ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ. [QBR]
ಯೆಶಾಯ 57 : 18 (IRVKN)
ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, [QBR] ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.” [QBR]
ಯೆಶಾಯ 57 : 19 (IRVKN)
ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, [QBR] ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ. [QBR]
ಯೆಶಾಯ 57 : 20 (IRVKN)
ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; [QBR] ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ. [QBR]
ಯೆಶಾಯ 57 : 21 (IRVKN)
“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ. [PE]

1 2 3 4 5 6 7 8 9 10 11 12 13 14 15 16 17 18 19 20 21

BG:

Opacity:

Color:


Size:


Font: